Jeremiah · chapter 19 · verse 6
Jeremiah 19:6 in Kannada
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
Heegiruvadarinda kartanu heluvadenandare --igo, dinagalu baruvavu; aaga ee sthalavu innu tophetendu, hinnomana magana taggendu alla, koleya taggendu kareyalpaduvadu.
Jeremiah 19:6 in English
- King James Version (KJV)
- Therefore, behold, the days come, saith the LORD, that this place shall no more be called Tophet, nor The valley of the son of Hinnom, but The valley of slaughter.
- World English Bible (WEB)
- Therefore, behold, the days come,” says the LORD, “that this place will no more be called ‘Topheth’, nor ‘The Valley of the son of Hinnom’, but ‘The valley of Slaughter’.
- American Standard Version (ASV)
- therefore, behold, the days come, saith Jehovah, that this place shall no more be called Topheth, nor The valley of the son of Hinnom, but The valley of Slaughter.
- Bible in Basic English (BBE)
- For this cause, see, a time is coming, says the Lord, when this place will no longer be named Topheth, or, The valley of the son of Hinnom, but, The valley of Death.
- Darby Translation (DBY)
- therefore behold, days come, saith Jehovah, that this place shall no more be called Topheth, nor Valley of the son of Hinnom, but the valley of slaughter.
- Webster's Bible (WBS)
- Therefore behold, the days come, saith the LORD, that this place shall no more be called Tophet, nor The valley of the son of Hinnom, but The valley of slaughter.
- Young's Literal Translation (YLT)
- 'Therefore, lo, days are coming — an affirmation of Jehovah — and this place is not called any more, Tophet, and Valley of the son of Hinnom, but, Valley of slaughter.
Read in context
- 4ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
- 5ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
- 6ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
- 7ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- 8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
Cross references
- Joshua 15:8 ಯೆಹೋಶುವ 15:8ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
- Jeremiah 19:2 ಯೆರೆಮೀಯ 19:2ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Jeremiah 7:32–33 ಯೆರೆಮೀಯ 7:32–33ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು. ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- Jeremiah 19:11 ಯೆರೆಮೀಯ 19:11ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.