Jeremiah · chapter 2 · verse 15
Jeremiah 2:15 in Kannada
ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
Praayada sinhagalu avanige virodhavaagi gharjisi, abba risuttave. Avana deshavannu haalumaaduttave; avana pattanagalu nivaasavillade suttuhogive.
Jeremiah 2:15 in English
- King James Version (KJV)
- The young lions roared upon him, [and] yelled, and they made his land waste: his cities are burned without inhabitant.
- World English Bible (WEB)
- The young lions have roared at him and raised their voices. They have made his land waste. His cities are burned up, without inhabitant.
- American Standard Version (ASV)
- The young lions have roared upon him, and yelled; and they have made his land waste: his cities are burned up, without inhabitant.
- Bible in Basic English (BBE)
- The young lions have made an outcry against him with a loud voice: they have made his land waste; his towns are burned up, with no one living in them.
- Darby Translation (DBY)
- The young lions roared against him, they gave forth their voice, and they made his land desolate: his cities are burned, without inhabitant.
- Webster's Bible (WBS)
- The young lions roared upon him, [and] yelled, and they made his land waste: his cities are burned without inhabitant.
- Young's Literal Translation (YLT)
- Against him roar do young lions, They have given forth their voice, And make his land become a desolation, His cities have been burnt without inhabitant.
Read in context
- 13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- 14ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?
- 15ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
- 16ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
- 17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
Cross references
- Jeremiah 4:7 ಯೆರೆಮೀಯ 4:7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- Jeremiah 50:17 ಯೆರೆಮೀಯ 50:17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
- Jeremiah 9:11 ಯೆರೆಮೀಯ 9:11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- Isaiah 1:7 ಯೆಶಾಯ 1:7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- Isaiah 5:29 ಯೆಶಾಯ 5:29ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- Amos 3:4 ಆಮೋಸ 3:4ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?
- Isaiah 24:1 ಯೆಶಾಯ 24:1ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
- Jeremiah 33:10 ಯೆರೆಮೀಯ 33:10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
- Jeremiah 34:22 ಯೆರೆಮೀಯ 34:22ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Zephaniah 3:6 ಚೆಫನ್ಯ 3:6ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
- Isaiah 5:9 ಯೆಶಾಯ 5:9ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
- Ezekiel 5:14 ಯೆಹೆಜ್ಕೇಲನು 5:14ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ.