Jeremiah · chapter 2 · verse 25
Jeremiah 2:25 in Kannada
ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
Ninna kaalu baree kaalaa gada haageyoo ninna gantalu neeradike padada haageyoo hintege; aadare neenu--illa, nireekshe yilla, yaakandare naanu anyarannu preeti maadiddene. Avara hinde naanu hoguttene endu neenu helidi.
Jeremiah 2:25 in English
- King James Version (KJV)
- Withhold thy foot from being unshod, and thy throat from thirst: but thou saidst, There is no hope: no; for I have loved strangers, and after them will I go.
- World English Bible (WEB)
- “Keep your feet from being bare, and your throat from thirst. But you said, ‘It is in vain. No, for I have loved strangers, and I will go after them.’
- American Standard Version (ASV)
- Withhold thy foot from being unshod, and thy throat from thirst. But thou saidst, It is in vain; no, for I have loved strangers, and after them will I go.
- Bible in Basic English (BBE)
- Do not let your foot be without shoes, or your throat dry from need of water: but you said, There is no hope: no, for I have been a lover of strange gods, and after them I will go.
- Darby Translation (DBY)
- Withhold thy foot from being unshod, and thy throat from thirst. But thou saidst, There is no hope; no, for I love strangers, and after them will I go.
- Webster's Bible (WBS)
- Withhold thy foot from being unshod, and thy throat from thirst: but thou saidst, There is no hope: no; for I have loved strangers, and after them will I go.
- Young's Literal Translation (YLT)
- Withhold thy foot from being unshod, And thy throat from thirst, And thou sayest, 'It is incurable, No, for I have loved strangers, and after them I go.'
Read in context
- 23ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
- 24ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
- 25ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
- 26ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
- 27ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
Cross references
- Deuteronomy 32:16 ಧರ್ಮೋಪದೇಶಕಾಂಡ 32:16ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
- Jeremiah 18:12 ಯೆರೆಮೀಯ 18:12ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
- Jeremiah 3:13 ಯೆರೆಮೀಯ 3:13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
- Romans 8:24 ರೋಮಾಪುರದವರಿಗೆ 8:24ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
- 2 Chronicles 28:22 2 ಪೂರ್ವಕಾಲವೃತ್ತಾಂತ 28:22ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
- Isaiah 20:2–4 ಯೆಶಾಯ 20:2–4ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು. ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು. ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
- Lamentations 4:4 ಪ್ರಲಾಪಗಳು 4:4ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
- Isaiah 2:6 ಯೆಶಾಯ 2:6ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
- Jeremiah 14:10 ಯೆರೆಮೀಯ 14:10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
- Jeremiah 13:22 ಯೆರೆಮೀಯ 13:22ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
- Deuteronomy 29:19–20 ಧರ್ಮೋಪದೇಶಕಾಂಡ 29:19–20ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- Deuteronomy 28:48 ಧರ್ಮೋಪದೇಶಕಾಂಡ 28:48ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.