Jeremiah · chapter 2 · verse 30
Jeremiah 2:30 in Kannada
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
Naanu nimma makkalannu hodedaddu vyarthavaayitu. Avaru shiksheyannu takkollalilla. Nimma svanta kattiyu naashamaaduva sinhadante nimma pravaadigalannu nungibittive.
Jeremiah 2:30 in English
- King James Version (KJV)
- In vain have I smitten your children; they received no correction: your own sword hath devoured your prophets, like a destroying lion.
- World English Bible (WEB)
- “I have struck your children in vain. They received no correction. Your own sword has devoured your prophets, like a destroying lion.
- American Standard Version (ASV)
- In vain have I smitten your children; they received no correction: your own sword hath devoured your prophets, like a destroying lion.
- Bible in Basic English (BBE)
- I gave your children blows to no purpose; they got no good from training: your sword has been the destruction of your prophets, like a death-giving lion.
- Darby Translation (DBY)
- In vain have I smitten your children: they received no correction. Your own sword hath devoured your prophets, like a destroying lion.
- Webster's Bible (WBS)
- In vain have I smitten your children; they have received no correction: your own sword hath devoured your prophets, like a destroying lion.
- Young's Literal Translation (YLT)
- In vain I have smitten your sons, Instruction they have not accepted, Devoured hath your sword your prophets, As a destroying lion.
Read in context
- 28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
- 29ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರು ನನಗೆ ವಿರೋಧವಾಗಿ ದ್ರೋಹಮಾಡಿ ದ್ದೀರಿ ಎಂದು ಕರ್ತನು ಅನ್ನುತ್ತಾನೆ.
- 30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- 31ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
- 32ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
Cross references
- Nehemiah 9:26 ನೆಹೆಮೀಯ 9:26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- 1 Thessalonians 2:15 1 ಥೆಸಲೊನೀಕದವರಿಗೆ 2:15ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
- Isaiah 1:5 ಯೆಶಾಯ 1:5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Jeremiah 26:20–24 ಯೆರೆಮೀಯ 26:20–24ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು. ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು. ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು. ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು. ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- Matthew 23:29 ಮತ್ತಾಯನು 23:29ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
- Jeremiah 7:28 ಯೆರೆಮೀಯ 7:28ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
- Isaiah 9:13 ಯೆಶಾಯ 9:13ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Jeremiah 6:29–30 ಯೆರೆಮೀಯ 6:29–30ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ. ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
- Luke 13:33–34 ಲೂಕನು 13:33–34ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು. ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.