Jeremiah · chapter 2 · verse 34
Jeremiah 2:34 in Kannada
ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
Idallade ninna seragugalalli aparaadhavillada badapraanigala raktavu sikkide; antarangada shodhaneyindalla, aadare ivarellara meleye adannu kandiddene.
Jeremiah 2:34 in English
- King James Version (KJV)
- Also in thy skirts is found the blood of the souls of the poor innocents: I have not found it by secret search, but upon all these.
- World English Bible (WEB)
- Also the blood of the souls of the innocent poor is found in your skirts. You didn’t find them breaking in, but it is because of all these things.
- American Standard Version (ASV)
- Also in thy skirts is found the blood of the souls of the innocent poor: thou didst not find them breaking in; but it is because of all these things.
- Bible in Basic English (BBE)
- And in the skirts of your robe may be seen the life-blood of those who have done no wrong: ...
- Darby Translation (DBY)
- Yea, in thy skirts is found the blood of the souls of the innocent poor, whom thou didst not encounter breaking in, but [it is found] upon all these.
- Webster's Bible (WBS)
- Also in thy skirts is found the blood of the souls of the poor innocents: I have not found it by secret search, but upon all these.
- Young's Literal Translation (YLT)
- Also in thy skirts hath been found the blood of innocent needy souls, Not by digging have I found them, but upon all these.
Read in context
- 32ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
- 33ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.
- 34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
- 35ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
- 36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
Cross references
- 2 Kings 21:16 2 ಅರಸುಗಳು 21:16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
- 2 Kings 24:4 2 ಅರಸುಗಳು 24:4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- Jeremiah 19:4 ಯೆರೆಮೀಯ 19:4ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
- Exodus 22:2 ವಿಮೋಚನಕಾಂಡ 22:2ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು.
- Ezekiel 20:31 ಯೆಹೆಜ್ಕೇಲನು 20:31ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
- Isaiah 57:5 ಯೆಶಾಯ 57:5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
- Ezekiel 24:7 ಯೆಹೆಜ್ಕೇಲನು 24:7ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
- Jeremiah 7:31 ಯೆರೆಮೀಯ 7:31ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
- Ezekiel 16:20–21 ಯೆಹೆಜ್ಕೇಲನು 16:20–21ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
- Isaiah 59:7 ಯೆಶಾಯ 59:7ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
- Psalm 106:37–38 ಕೀರ್ತನೆಗಳು 106:37–38ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
- Jeremiah 6:15 ಯೆರೆಮೀಯ 6:15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.