Jeremiah · chapter 2 · verse 37
Jeremiah 2:37 in Kannada
ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
Haudu, allinda saha ninna kaigalannu taleya mele ittukondu horatuhoguvi; kartanu ninna bharavasegalannu tiraskarisiddaane, avugalalli ninage saphalavaaguvadilla.
Jeremiah 2:37 in English
- King James Version (KJV)
- Yea, thou shalt go forth from him, and thine hands upon thine head: for the LORD hath rejected thy confidences, and thou shalt not prosper in them.
- World English Bible (WEB)
- You will also leave that place with your hands on your head; for the LORD has rejected those in whom you trust, and you won’t prosper with them.
- American Standard Version (ASV)
- From thence also shalt thou go forth, with thy hands upon thy head: for Jehovah hath rejected those in whom thou trustest, and thou shalt not prosper with them.
- Bible in Basic English (BBE)
- Truly, you will go out from him with your hands on your head: for the Lord has given up those in whom you have put your faith, and they will be of no help to you.
- Darby Translation (DBY)
- Thou shalt indeed go forth from her with thy hands upon thy head; for Jehovah hath rejected those thou confidest in, and thou shalt not prosper by them.
- Webster's Bible (WBS)
- Yes, thou shalt go forth from him, and thy hands upon thy head: for the LORD hath rejected thy confidences, and thou shalt not prosper in them.
- Young's Literal Translation (YLT)
- Also from this thou goest out, And thy hands on thy head, For Jehovah hath kicked at thy confidences, And thou dost not give prosperity to them!
Read in context
- 35ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
- 36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- 37ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
Cross references
- 2 Samuel 13:19 2 ಸಮುವೇಲನು 13:19ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
- Jeremiah 17:5 ಯೆರೆಮೀಯ 17:5ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
- Ezekiel 17:15–20 ಯೆಹೆಜ್ಕೇಲನು 17:15–20ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
- Jeremiah 37:7–10 ಯೆರೆಮೀಯ 37:7–10ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು. ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Numbers 14:41 ಅರಣ್ಯಕಾಂಡ 14:41ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
- Jeremiah 2:36 ಯೆರೆಮೀಯ 2:36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Isaiah 10:4 ಯೆಶಾಯ 10:4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Jeremiah 32:5 ಯೆರೆಮೀಯ 32:5ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
- 2 Chronicles 13:12 2 ಪೂರ್ವಕಾಲವೃತ್ತಾಂತ 13:12ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.