Jeremiah · chapter 21 · verse 6
Jeremiah 21:6 in Kannada
ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
Ee pattanada nivaasigalannoo manushyarannoo mruga galannoo sahitavaagi hodeyuvenu; avaru dodda jaadyadinda saayuvaru.
Jeremiah 21:6 in English
- King James Version (KJV)
- And I will smite the inhabitants of this city, both man and beast: they shall die of a great pestilence.
- World English Bible (WEB)
- I will strike the inhabitants of this city, both man and animal. They will die of a great pestilence.
- American Standard Version (ASV)
- And I will smite the inhabitants of this city, both man and beast: they shall die of a great pestilence.
- Bible in Basic English (BBE)
- And I will send a great disease on the people living in this town, on man and on beast, causing their death.
- Darby Translation (DBY)
- And I will smite the inhabitants of this city, both man and beast: they shall die of a great pestilence.
- Webster's Bible (WBS)
- And I will smite the inhabitants of this city, both man and beast; they shall die by a great pestilence.
- Young's Literal Translation (YLT)
- And I have smitten the inhabitants of this city, Both man and beast, By a great pestilence do they die.
Read in context
- 4ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
- 5ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
- 6ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
- 7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- 8ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
Cross references
- Ezekiel 14:19 ಯೆಹೆಜ್ಕೇಲನು 14:19ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,
- Ezekiel 14:13 ಯೆಹೆಜ್ಕೇಲನು 14:13ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
- Jeremiah 12:3–4 ಯೆರೆಮೀಯ 12:3–4ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು. ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- Ezekiel 14:17 ಯೆಹೆಜ್ಕೇಲನು 14:17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
- Isaiah 6:11 ಯೆಶಾಯ 6:11ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
- Jeremiah 33:12 ಯೆರೆಮೀಯ 33:12ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
- Zephaniah 1:3 ಚೆಫನ್ಯ 1:3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- Jeremiah 32:24 ಯೆರೆಮೀಯ 32:24ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
- Ezekiel 14:21 ಯೆಹೆಜ್ಕೇಲನು 14:21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Hosea 4:3 ಹೋಶೇಯ 4:3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- Ezekiel 33:27 ಯೆಹೆಜ್ಕೇಲನು 33:27ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.
- Jeremiah 7:20 ಯೆರೆಮೀಯ 7:20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.