Jeremiah · chapter 22 · verse 17
Jeremiah 22:17 in Kannada
ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
Aadare ninna kannugalu ninna hrudayavu ninna durlaabhada mele, aparaadhavilladavana rakta chelluvadara mele mattu peedeyannoo balaatkaaravannoo maaduvadara meleye horatu mattaavadara meleyoo iruvadilla.
Jeremiah 22:17 in English
- King James Version (KJV)
- But thine eyes and thine heart [are] not but for thy covetousness, and for to shed innocent blood, and for oppression, and for violence, to do [it].
- World English Bible (WEB)
- But your eyes and your heart are only for your covetousness, for shedding innocent blood, for oppression, and for doing violence.”
- American Standard Version (ASV)
- But thine eyes and thy heart are not but for thy covetousness, and for shedding innocent blood, and for oppression, and for violence, to do it.
- Bible in Basic English (BBE)
- But your eyes and your heart are fixed only on profit for yourself, on causing the death of him who has done no wrong, and on violent and cruel acts.
- Darby Translation (DBY)
- But thine eyes and thy heart are only on thine extortion, and on the blood of the innocent, to shed it, and on oppression and on violence, to do it.
- Webster's Bible (WBS)
- But thy eyes and thy heart [are] only for thy covetousness, and for shedding innocent blood, and for oppression, and for violence, to do [it] .
- Young's Literal Translation (YLT)
- But thine eyes and thy heart are not, Except on thy dishonest gain, And on shedding of innocent blood, And on oppression, and on doing of violence.
Read in context
- 15ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
- 16ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
- 17ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- 18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
- 19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
Cross references
- 2 Kings 24:4 2 ಅರಸುಗಳು 24:4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- Jeremiah 22:3 ಯೆರೆಮೀಯ 22:3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- 2 Peter 2:14 2 ಪೇತ್ರನು 2:14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
- Ezekiel 19:6 ಯೆಹೆಜ್ಕೇಲನು 19:6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Psalm 10:3 ಕೀರ್ತನೆಗಳು 10:3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- Zephaniah 3:3 ಚೆಫನ್ಯ 3:3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 2 Chronicles 36:8 2 ಪೂರ್ವಕಾಲವೃತ್ತಾಂತ 36:8ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.
- Mark 7:21–22 ಮಾರ್ಕನು 7:21–22ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- James 1:14–15 ಯಾಕೋಬನು 1:14–15ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- Luke 12:15–21 ಲೂಕನು 12:15–21ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು. ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು. ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.