Jeremiah · chapter 22 · verse 26
Jeremiah 22:26 in Kannada
ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ.
Ninnannoo ninna hetta taayi yannoo neevu huttadiruva bere deshadalli esedu biduvenu; alle saayuviri.
Jeremiah 22:26 in English
- King James Version (KJV)
- And I will cast thee out, and thy mother that bare thee, into another country, where ye were not born; and there shall ye die.
- World English Bible (WEB)
- I will cast you out with your mother who bore you into another country, where you were not born; and there you will die.
- American Standard Version (ASV)
- And I will cast thee out, and thy mother that bare thee, into another country, where ye were not born; and there shall ye die.
- Bible in Basic English (BBE)
- I will send you out, and your mother who gave you birth, into another country not the land of your birth; and there death will come to you.
- Darby Translation (DBY)
- And I will cast thee out, and thy mother that bare thee, into another country, where ye were not born; and there shall ye die.
- Webster's Bible (WBS)
- And I will cast thee out, and thy mother that bore thee, into another country, where ye were not born; and there shall ye die.
- Young's Literal Translation (YLT)
- And I have cast thee, And thy mother who bore thee, unto another country, Where ye were not born, and there do ye die.
Read in context
- 24ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
- 25ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.
- 26ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ.
- 27ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು.
- 28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
Cross references
- 2 Kings 24:15 2 ಅರಸುಗಳು 24:15ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
- 2 Kings 24:8 2 ಅರಸುಗಳು 24:8ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.
- Isaiah 22:17 ಯೆಶಾಯ 22:17ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.
- Jeremiah 15:2–4 ಯೆರೆಮೀಯ 15:2–4ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ. ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- 2 Chronicles 36:9–10 2 ಪೂರ್ವಕಾಲವೃತ್ತಾಂತ 36:9–10ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- Ezekiel 19:9–14 ಯೆಹೆಜ್ಕೇಲನು 19:9–14ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು. ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ. ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ. ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು. ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ. ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.