Jeremiah · chapter 23 · verse 11
Jeremiah 23:11 in Kannada
ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
Pravaadiyoo yaajakanoo kooda bhrashtare; haudu, nanna aalayadalli avara kettatanavannu kandiddenendu kartanu annuttaane.
Jeremiah 23:11 in English
- King James Version (KJV)
- For both prophet and priest are profane; yea, in my house have I found their wickedness, saith the LORD.
- World English Bible (WEB)
- for both prophet and priest are profane. Yes, in my house I have found their wickedness,” says the LORD.
- American Standard Version (ASV)
- for both prophet and priest are profane; yea, in my house have I found their wickedness, saith Jehovah.
- Bible in Basic English (BBE)
- For the prophet as well as the priest is unclean; even in my house I have seen their evil-doing, says the Lord.
- Darby Translation (DBY)
- For both prophet and priest are profane: even in my house have I found their wickedness, saith Jehovah.
- Webster's Bible (WBS)
- For both prophet and priest are profane; even in my house have I found their wickedness, saith the LORD.
- Young's Literal Translation (YLT)
- For both prophet and priest have been profane, Yea, in My house I found their wickedness, An affirmation of Jehovah.
Read in context
- 9ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
- 10ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
- 11ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
- 12ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
- 13ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
Cross references
- Zephaniah 3:4 ಚೆಫನ್ಯ 3:4ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
- Jeremiah 6:13 ಯೆರೆಮೀಯ 6:13ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
- Matthew 21:12–13 ಮತ್ತಾಯನು 21:12–13ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು. ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- Jeremiah 32:34 ಯೆರೆಮೀಯ 32:34ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
- Ezekiel 23:39 ಯೆಹೆಜ್ಕೇಲನು 23:39ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
- Ezekiel 8:16 ಯೆಹೆಜ್ಕೇಲನು 8:16ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
- Jeremiah 11:15 ಯೆರೆಮೀಯ 11:15ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
- Jeremiah 7:10–11 ಯೆರೆಮೀಯ 7:10–11ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ? ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- 2 Chronicles 36:14 2 ಪೂರ್ವಕಾಲವೃತ್ತಾಂತ 36:14ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
- Jeremiah 7:30 ಯೆರೆಮೀಯ 7:30ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
- Jeremiah 8:10 ಯೆರೆಮೀಯ 8:10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
- Ezekiel 8:5–6 ಯೆಹೆಜ್ಕೇಲನು 8:5–6ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು. ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.