Jeremiah · chapter 23 · verse 31
Jeremiah 23:31 in Kannada
ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
Igo, tamma naaligegalannu aadi suttaa--aatanu nudiyuttaane endu annuva pravaadigalige naanu virodhavaagiddenendu kartanu annuttaane.
Jeremiah 23:31 in English
- King James Version (KJV)
- Behold, I [am] against the prophets, saith the LORD, that use their tongues, and say, He saith.
- World English Bible (WEB)
- Behold, I am against the prophets,” says the LORD, “who use their tongues, and say, ‘He says.’
- American Standard Version (ASV)
- Behold, I am against the prophets, saith Jehovah, that use their tongues, and say, He saith.
- Bible in Basic English (BBE)
- See, I am against the prophets, says the Lord, who let their tongues say, He has said.
- Darby Translation (DBY)
- Behold, I am against the prophets, saith Jehovah, that use their tongues, and say, He hath said.
- Webster's Bible (WBS)
- Behold, I [am] against the prophets, saith the LORD, that use their tongues, and say, He saith.
- Young's Literal Translation (YLT)
- Lo, I [am] against the prophets, An affirmation of Jehovah, Who are making smooth their tongue, And they affirm — an affirmation.
Read in context
- 29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
- 30ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 31ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- 33ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
Cross references
- Jeremiah 23:17 ಯೆರೆಮೀಯ 23:17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
- 2 Chronicles 18:10–12 2 ಪೂರ್ವಕಾಲವೃತ್ತಾಂತ 18:10–12ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನಲ್ಲಿರುವ ರಾಮೋ ತಿಗೆ ಹೋಗಿ ಜಯಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
- 2 Chronicles 18:5 2 ಪೂರ್ವಕಾಲವೃತ್ತಾಂತ 18:5ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- 2 Chronicles 18:19–21 2 ಪೂರ್ವಕಾಲವೃತ್ತಾಂತ 18:19–21ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
- Micah 2:11 ಮೀಕ 2:11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.