Jeremiah · chapter 23 · verse 32
Jeremiah 23:32 in Kannada
ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
Igo, sullina kanasugalannu pravaadisi; tamma sullugalindaloo nirarthakavaada vugalindaloo nanna janaru tappuvante maaduvavarige virodhavaagiddene; naanu avarannu kaluhisalilla, avarige appanekodalilla; aadadarinda avaru hegoo ee janarige prayojanavaagiruvade illavendu kartanu annuttaane.
Jeremiah 23:32 in English
- King James Version (KJV)
- Behold, I [am] against them that prophesy false dreams, saith the LORD, and do tell them, and cause my people to err by their lies, and by their lightness; yet I sent them not, nor commanded them: therefore they shall not profit this people at all, saith the LORD.
- World English Bible (WEB)
- Behold, I am against those who prophesy lying dreams,” says the LORD, “who tell them, and cause my people to err by their lies, and by their vain boasting; yet I didn’t send them or command them. They don’t profit this people at all,” says the LORD.
- American Standard Version (ASV)
- Behold, I am against them that prophesy lying dreams, saith Jehovah, and do tell them, and cause my people to err by their lies, and by their vain boasting: yet I sent them not, nor commanded them; neither do they profit this people at all, saith Jehovah.
- Bible in Basic English (BBE)
- See, I am against the prophets of false dreams, says the Lord, who give them out and make my people go out of the way by their deceit and their uncontrolled words: but I did not send them or give them orders; and they will be of no profit to this people, says the Lord.
- Darby Translation (DBY)
- Behold, I am against them that prophesy false dreams, saith Jehovah, and that tell them, and cause my people to err by their lies and by their boasting; and I have not sent them, nor commanded them; and they profit not this people at all, saith Jehovah.
- Webster's Bible (WBS)
- Behold, I [am] against them that prophesy false dreams, saith the LORD, and do tell them, and cause my people to err by their lies, and by their lightness; yet I sent them not, nor commanded them: therefore they shall not profit this people at all, saith the LORD.
- Young's Literal Translation (YLT)
- Lo, I [am] against the prophets of false dreams, An affirmation of Jehovah, And they recount them, and cause my people to err, By their falsehoods, and by their instability, And I — I have not sent them, Nor have I commanded them, And they are not at all profitable to this people, An affirmation of Jehovah.
Read in context
- 30ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 31ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- 33ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
- 34ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು.
Cross references
- Lamentations 2:14 ಪ್ರಲಾಪಗಳು 2:14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
- Ezekiel 13:7–18 ಯೆಹೆಜ್ಕೇಲನು 13:7–18ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ. ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ-- ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
- Zephaniah 3:4 ಚೆಫನ್ಯ 3:4ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
- Zechariah 13:2–3 ಜೆಕರ್ಯ 13:2–3ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ. ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
- Jeremiah 7:8 ಯೆರೆಮೀಯ 7:8ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
- Jeremiah 29:31 ಯೆರೆಮೀಯ 29:31ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Jeremiah 23:21–22 ಯೆರೆಮೀಯ 23:21–22ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು. ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Deuteronomy 18:20 ಧರ್ಮೋಪದೇಶಕಾಂಡ 18:20ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
- Jeremiah 23:25 ಯೆರೆಮೀಯ 23:25ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.
- Jeremiah 27:14–22 ಯೆರೆಮೀಯ 27:14–22ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ. ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು? ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ-- ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ. ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
Original words (Hebrew)
- prophesy · H5012נָבָא nâbâʼ
- false · H8267שֶׁקֶר sheqer
- dreams · H2472חֲלוֹם chălôwm
- saith · H5002נְאֻם nᵉʼum
- tell · H5608סָפַר çâphar
- people · H5971עַם ʻam
- err · H8582תָּעָה tâʻâh
- lies · H8267שֶׁקֶר sheqer
- lightness · H6350פַּחֲזוּת pachăzûwth
- sent · H7971שָׁלַח shâlach
- commanded · H6680צָוָה tsâvâh
- profit · H3276יַעַל yaʻal
- people · H5971עַם ʻam
- all · H3276יַעַל yaʻal
- saith · H5002נְאֻם nᵉʼum