Jeremiah · chapter 23 · verse 40
Jeremiah 23:40 in Kannada
ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
Maretu hogalaarada nityavaada nindeyannoo nityavaada avamaanavannoo ninna mele baramaaduttene.
Jeremiah 23:40 in English
- King James Version (KJV)
- And I will bring an everlasting reproach upon you, and a perpetual shame, which shall not be forgotten.
- World English Bible (WEB)
- I will bring an everlasting reproach on you, and a perpetual shame, which will not be forgotten.’”
- American Standard Version (ASV)
- and I will bring an everlasting reproach upon you, and a perpetual shame, which shall not be forgotten.
- Bible in Basic English (BBE)
- And I will give you a name without honour for ever, and unending shame which will never go from the memory of men.
- Darby Translation (DBY)
- And I will bring everlasting reproach upon you, and everlasting shame, that shall not be forgotten.
- Webster's Bible (WBS)
- And I will bring an everlasting reproach upon you, and a perpetual shame, which shall not be forgotten.
- Young's Literal Translation (YLT)
- And I have put on you reproach age-during, And shame age-during that is not forgotten!
Read in context
- 38ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ
- 39ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
- 40ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
Cross references
- Jeremiah 20:11 ಯೆರೆಮೀಯ 20:11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
- Ezekiel 5:14–15 ಯೆಹೆಜ್ಕೇಲನು 5:14–15ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ. ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
- Jeremiah 42:18 ಯೆರೆಮೀಯ 42:18ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
- Jeremiah 44:8–12 ಯೆರೆಮೀಯ 44:8–12ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ? ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ? ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ. ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ. ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
- Daniel 12:2 ದಾನಿಯೇಲನು 12:2ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
- Daniel 9:16 ದಾನಿಯೇಲನು 9:16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
- Deuteronomy 28:37 ಧರ್ಮೋಪದೇಶಕಾಂಡ 28:37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
- Hosea 4:7 ಹೋಶೇಯ 4:7ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.