Jeremiah · chapter 24 · verse 2
Jeremiah 24:2 in Kannada
ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
Ondu puttiyalli bahala olle hannugalu modalu maaguva hannugala haage iruvavugaloo mattondu puttiyalli bahala ketta hannugalu, tinnakoodada haage ashtu kettavugaloo iddavu.
Jeremiah 24:2 in English
- King James Version (KJV)
- One basket [had] very good figs, [even] like the figs [that are] first ripe: and the other basket [had] very naughty figs, which could not be eaten, they were so bad.
- World English Bible (WEB)
- One basket had very good figs, like the figs that are first-ripe; and the other basket had very bad figs, which could not be eaten, they were so bad.
- American Standard Version (ASV)
- One basket had very good figs, like the figs that are first-ripe; and the other basket had very bad figs, which could not be eaten, they were so bad.
- Bible in Basic English (BBE)
- One basket had very good figs, like the figs which first come to growth: and the other basket had very bad figs, so bad that they were of no use for food.
- Darby Translation (DBY)
- One basket had very good figs, like the figs first ripe; and the other basket had very bad figs, which could not be eaten for badness.
- Webster's Bible (WBS)
- One basket [had] very good figs, [even] like the figs [that are] first ripe: and the other basket [had] very poor figs, which could not be eaten, they were so bad.
- Young's Literal Translation (YLT)
- In the one basket [are] figs very good, like the first-ripe figs, and in the other basket [are] figs very bad, that are not eaten for badness.
Read in context
- 1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
- 2ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
- 3ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
- 4ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
Cross references
- Isaiah 5:7 ಯೆಶಾಯ 5:7ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Isaiah 5:4 ಯೆಶಾಯ 5:4ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
- Micah 7:1 ಮೀಕ 7:1ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
- Matthew 5:13 ಮತ್ತಾಯನು 5:13ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
- Hosea 9:10 ಹೋಶೇಯ 9:10ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
- Jeremiah 24:5–10 ಯೆರೆಮೀಯ 24:5–10ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು. ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು. ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು. ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ. ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು. ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Jeremiah 29:17 ಯೆರೆಮೀಯ 29:17ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
- Ezekiel 15:2–5 ಯೆಹೆಜ್ಕೇಲನು 15:2–5ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ? ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?
- Malachi 1:12–14 ಮಲಾಕಿಯ 1:12–14ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ. ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Original words (Hebrew)
- One · H259אֶחָד ʼechâd
- basket · H1731דּוּד dûwd
- very · H3966מְאֹד mᵉʼôd
- good · H2896טוֹב ṭôwb
- figs · H8384תְּאֵן tᵉʼên
- figs · H8384תְּאֵן tᵉʼên
- ripe · H1073בַּכֻּרָה bakkurâh
- other · H259אֶחָד ʼechâd
- basket · H1731דּוּד dûwd
- very · H3966מְאֹד mᵉʼôd
- naughty · H7451רַע raʻ
- figs · H8384תְּאֵן tᵉʼên
- eaten · H398אָכַל ʼâkal
- bad · H7455רֹעַ rôaʻ