Jeremiah · chapter 24 · verse 7
Jeremiah 24:7 in Kannada
ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
Naane kartanendu nannannu tilukolluvadakke avarige hrudayavannu koduvenu. Avaru nanna janaraagi ruvaru; naanu avara devaraagiruvenu; tamma poorna hrudayadinda nanna balige hintirugikollu varu.
Jeremiah 24:7 in English
- King James Version (KJV)
- And I will give them an heart to know me, that I [am] the LORD: and they shall be my people, and I will be their God: for they shall return unto me with their whole heart.
- World English Bible (WEB)
- I will give them a heart to know me, that I am the LORD. They will be my people, and I will be their God; for they will return to me with their whole heart.
- American Standard Version (ASV)
- And I will give them a heart to know me, that I am Jehovah: and they shall be my people, and I will be their God; for they shall return unto me with their whole heart.
- Bible in Basic English (BBE)
- And I will give them a heart to have knowledge of me, that I am the Lord: and they will be my people, and I will be their God: for they will come back to me with all their heart.
- Darby Translation (DBY)
- And I will give them a heart to know me, that I am Jehovah; and they shall be my people, and I will be their God: for they shall return unto me with their whole heart.
- Webster's Bible (WBS)
- And I will give them a heart to know me, that I [am] the LORD: and they shall be my people, and I will be their God: for they shall return to me with their whole heart.
- Young's Literal Translation (YLT)
- And have given to them a heart to know Me, For I [am] Jehovah, And they have been to Me for a people, And I am to them for God, For they turned back unto Me with all their heart.
Read in context
- 5ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
- 6ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
- 7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- 8ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
- 9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
Cross references
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Jeremiah 30:22 ಯೆರೆಮೀಯ 30:22ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
- Ezekiel 37:23 ಯೆಹೆಜ್ಕೇಲನು 37:23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
- Ezekiel 36:24–28 ಯೆಹೆಜ್ಕೇಲನು 36:24–28ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು. ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ. ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
- Ezekiel 11:19–20 ಯೆಹೆಜ್ಕೇಲನು 11:19–20ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು. ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
- Zechariah 8:8 ಜೆಕರ್ಯ 8:8ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
- Romans 6:17 ರೋಮಾಪುರದವರಿಗೆ 6:17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
- Deuteronomy 30:2–6 ಧರ್ಮೋಪದೇಶಕಾಂಡ 30:2–6ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು. ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು. ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು. ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
- Jeremiah 31:33–34 ಯೆರೆಮೀಯ 31:33–34ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ. ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- Jeremiah 32:38–40 ಯೆರೆಮೀಯ 32:38–40ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು. ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Ezekiel 37:27 ಯೆಹೆಜ್ಕೇಲನು 37:27ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
- Deuteronomy 4:29–31 ಧರ್ಮೋಪದೇಶಕಾಂಡ 4:29–31ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.