Jeremiah · chapter 25 · verse 10
Jeremiah 25:10 in Kannada
ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
Idallade ullaasada shabdavannoo santoshada svaravannoo madalingana svaravannoo madalagittiya svaravannoo beesuva kallina shabdavannoo deepada belakannoo avarolaginda tegeduhaakuttene.
Jeremiah 25:10 in English
- King James Version (KJV)
- Moreover I will take from them the voice of mirth, and the voice of gladness, the voice of the bridegroom, and the voice of the bride, the sound of the millstones, and the light of the candle.
- World English Bible (WEB)
- Moreover I will take from them the voice of mirth and the voice of gladness, the voice of the bridegroom and the voice of the bride, the sound of the millstones, and the light of the lamp.
- American Standard Version (ASV)
- Moreover I will take from them the voice of mirth and the voice of gladness, the voice of the bridegroom and the voice of the bride, the sound of the millstones, and the light of the lamp.
- Bible in Basic English (BBE)
- And more than this, I will take from them the sound of laughing voices, the voice of joy, the voice of the newly-married man, and the voice of the bride, the sound of the stones crushing the grain, and the shining of lights.
- Darby Translation (DBY)
- And I will cause to perish from them the voice of mirth and the voice of joy, the voice of the bridegroom and the voice of the bride, the sound of the millstones and the light of the lamp.
- Webster's Bible (WBS)
- Moreover I will take from them the voice of mirth, and the voice of gladness, the voice of the bridegroom, and the voice of the bride, the sound of the millstones, and the light of the candle.
- Young's Literal Translation (YLT)
- And I have destroyed from them the voice of rejoicing, and the voice of joy, voice of bridegroom and voice of bride, noise of millstones, and the light of lamps.
Read in context
- 8ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
- 9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- 10ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
- 11ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
- 12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
Cross references
- Jeremiah 7:34 ಯೆರೆಮೀಯ 7:34ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- Ezekiel 26:13 ಯೆಹೆಜ್ಕೇಲನು 26:13ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ.
- Revelation 18:22–23 ಪ್ರಕಟನೆ 18:22–23ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Jeremiah 16:9 ಯೆರೆಮೀಯ 16:9ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.
- Jeremiah 33:10–11 ಯೆರೆಮೀಯ 33:10–11ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- Esther 7:4 ಎಸ್ತೇರಳು 7:4ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
- Esther 3:13 ಎಸ್ತೇರಳು 3:13ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
- Ecclesiastes 12:2–4 ಪ್ರಸಂಗಿ 12:2–4ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಕತ್ತಲಾಗದಿರುವಾಗಲೇ ಮಳೆಯ ಮೋಡ ಗಳು ತಿರಿಗಿ ಬರುವದಕ್ಕಿಂತ ಮುಂಚೆಯೇ ಆತನನ್ನು ಸ್ಮರಿಸು. ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು. ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು.
- Esther 8:11 ಎಸ್ತೇರಳು 8:11ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
- Hosea 2:11 ಹೋಶೇಯ 2:11ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
- Isaiah 24:7–12 ಯೆಶಾಯ 24:7–12ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ. ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
Original words (Hebrew)
- take · H6אָבַד ʼâbad
- voice · H6963קוֹל qôwl
- mirth · H8342שָׂשׂוֹן sâsôwn
- voice · H6963קוֹל qôwl
- gladness · H8057שִׂמְחָה simchâh
- voice · H6963קוֹל qôwl
- bridegroom · H2860חָתָן châthân
- voice · H6963קוֹל qôwl
- bride · H3618כַּלָּה kallâh
- sound · H6963קוֹל qôwl
- millstones · H7347רֵחֶה rêcheh
- light · H216אוֹר ʼôwr
- candle · H5216נִיר nîyr