Jeremiah · chapter 25 · verse 15
Jeremiah 25:15 in Kannada
ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
Israayelina devaraada kartanu nanage heege heluttaane--ee raudrada draakshaarasa paatre yannu, naanu ninnannu kaluhisuva ellaa janaangagalu adannu kudiyuvante nanna kaiyinda takko.
Jeremiah 25:15 in English
- King James Version (KJV)
- For thus saith the LORD God of Israel unto me; Take the wine cup of this fury at my hand, and cause all the nations, to whom I send thee, to drink it.
- World English Bible (WEB)
- For the LORD, the God of Israel, says to me: “Take this cup of the wine of wrath from my hand, and cause all the nations to whom I send you to drink it.
- American Standard Version (ASV)
- For thus saith Jehovah, the God of Israel, unto me: Take this cup of the wine of wrath at my hand, and cause all the nations, to whom I send thee, to drink it.
- Bible in Basic English (BBE)
- For this is what the Lord, the God of Israel, has said to me: Take the cup of the wine of this wrath from my hand, and make all the nations to whom I send you take of it.
- Darby Translation (DBY)
- For thus hath Jehovah the God of Israel said unto me: Take the cup of the wine of this fury at my hand, and cause all the nations to whom I send thee to drink it.
- Webster's Bible (WBS)
- For thus saith the LORD God of Israel to me; Take the wine cup of this fury at my hand, and cause all the nations, to whom I send thee, to drink it.
- Young's Literal Translation (YLT)
- 'For thus said Jehovah God of Israel unto me, Take the wine cup of this fury out of My hand, and thou hast caused all the nations to drink it unto whom I am sending thee;
Read in context
- 13ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.
- 14ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
- 15ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
- 16ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
- 17ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.
Cross references
- Psalm 75:8 ಕೀರ್ತನೆಗಳು 75:8ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
- Isaiah 51:17 ಯೆಶಾಯ 51:17ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
- Revelation 14:10 ಪ್ರಕಟನೆ 14:10ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
- Job 21:20 ಯೋಬನು 21:20ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.
- Isaiah 51:22 ಯೆಶಾಯ 51:22ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- Jeremiah 51:7 ಯೆರೆಮೀಯ 51:7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Jeremiah 13:12–14 ಯೆರೆಮೀಯ 13:12–14ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು. ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
- Revelation 14:19 ಪ್ರಕಟನೆ 14:19ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.