Jeremiah · chapter 25 · verse 21
Jeremiah 25:21 in Kannada
ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ
Edomigoo movaa bigoo ammonana makkaligoo
Jeremiah 25:21 in English
- King James Version (KJV)
- Edom, and Moab, and the children of Ammon,
- World English Bible (WEB)
- Edom, Moab, and the children of Ammon;
- American Standard Version (ASV)
- Edom, and Moab, and the children of Ammon;
- Bible in Basic English (BBE)
- Edom and Moab and the children of Ammon,
- Darby Translation (DBY)
- Edom, and Moab, and the children of Ammon;
- Webster's Bible (WBS)
- Edom, and Moab, and the children of Ammon,
- Young's Literal Translation (YLT)
- Edom, and Moab, and the sons of Ammon,
Read in context
- 19ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ
- 20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
- 21ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ
- 22ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ
- 23ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ
Cross references
- Jeremiah 48:1–22 ಯೆರೆಮೀಯ 48:1–22ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು. ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು. ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು. ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು. ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ. ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ. ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು. ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು. ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ. ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ. ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ. ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು. ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ ಹಾಗೆಯೇ ಮೋವಾಬು ಕೇಮೋ ಷನ ವಿಷಯ ನಾಚಿಕೆಪಡುವದು. ನಾವು ಪರಾಕ್ರಮ ಶಾಲಿಗಳೂ ಯುದ್ಧಕ್ಕೆ ಬಲಿಷ್ಠರೂ ಎಂದು ನೀವು ಹೇಳುವದು ಹೇಗೆ? ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ. ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ. ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ. ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು. ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು. ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ. ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್ನ ಮೇಲೆಯೂ ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
- Psalm 137:7 ಕೀರ್ತನೆಗಳು 137:7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
- Jeremiah 9:26 ಯೆರೆಮೀಯ 9:26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- Isaiah 63:1–6 ಯೆಶಾಯ 63:1–6ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು. ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು. ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು. ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
- Obadiah 1:18 ಓಬದ್ಯ 1:18ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ.
- Lamentations 4:21–22 ಪ್ರಲಾಪಗಳು 4:21–22ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು. ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Ezekiel 35:1–15 ಯೆಹೆಜ್ಕೇಲನು 35:1–15ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ, ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು; ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ. ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು. ಹೀಗೆ ನಾನು ಸೇಯಾರ್ ಪರ್ವತವನ್ನು ಸಂಪೂರ್ಣ ಹಾಳು ಮಾಡುವೆನು; ಅದರೊಳಗೆ ಹಾದು ಹೋಗು ವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು. ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿ ಸುವರು. ನಿನ್ನ ಕತ್ತಿಯಿಂದ ಹತವಾದವರು ನಿನ್ನ ಹಳ್ಳ ಕೊಳ್ಳಗಳಲ್ಲಿಯೂ ಬೀಳುವರು. ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ. ಆದದರಿಂದ ದೇವರಾದ ಕರ್ತನು ಹೇಳುತ್ತಾನೆ--ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೇಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದ ಮೇಲೆ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ. ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ. ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು. ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
- Isaiah 25:10 ಯೆಶಾಯ 25:10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
- Isaiah 15:1–9 ಯೆಶಾಯ 15:1–9ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು. ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು. ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ. ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ. ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್ ಏಲೀಮಿನ ವರೆಗೂ ವ್ಯಾಪಿಸಿದೆ.ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು. ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
- Isaiah 34:1–17 ಯೆಶಾಯ 34:1–17ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ. ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ. ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ. ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು. ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು. ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು. ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು. ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು. ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು. ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು. ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು. ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
- Jeremiah 27:3 ಯೆರೆಮೀಯ 27:3ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.