Jeremiah · chapter 25 · verse 24
Jeremiah 25:24 in Kannada
ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ
Arabiyada arasarellarigoo aranyadalli vaasisuva mishravaada janara arasarellarigoo
Jeremiah 25:24 in English
- King James Version (KJV)
- And all the kings of Arabia, and all the kings of the mingled people that dwell in the desert,
- World English Bible (WEB)
- and all the kings of Arabia, all the kings of the mixed people who dwell in the wilderness;
- American Standard Version (ASV)
- and all the kings of Arabia, and all the kings of the mingled people that dwell in the wilderness;
- Bible in Basic English (BBE)
- And all the kings of Arabia, and all the kings of the mixed people living in the waste land;
- Darby Translation (DBY)
- and all the kings of Arabia, and all the kings of the mingled people that dwell in the desert;
- Webster's Bible (WBS)
- And all the kings of Arabia, and all the kings of the mingled people that dwell in the desert,
- Young's Literal Translation (YLT)
- And all the kings of Arabia, And all the kings of the mixed people, Who are dwelling in the wilderness,
Read in context
- 22ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ
- 23ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ
- 24ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ
- 25ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
- 26ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
Cross references
- 2 Chronicles 9:14 2 ಪೂರ್ವಕಾಲವೃತ್ತಾಂತ 9:14ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.
- Jeremiah 25:20 ಯೆರೆಮೀಯ 25:20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
- Jeremiah 50:37 ಯೆರೆಮೀಯ 50:37ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
- Ezekiel 30:5 ಯೆಹೆಜ್ಕೇಲನು 30:5ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.
- 1 Kings 10:15 1 ಅರಸುಗಳು 10:15ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
- Genesis 25:12–16 ಆದಿಕಾಂಡ 25:12–16ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು. ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್ ಮಿಷ್ಮಾ ದೂಮಾ ಮಸ್ಸಾ ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ. ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.
- Genesis 37:25–28 ಆದಿಕಾಂಡ 37:25–28ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು. ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು? ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು. ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
- Ezekiel 27:21 ಯೆಹೆಜ್ಕೇಲನು 27:21ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
- Isaiah 21:13 ಯೆಶಾಯ 21:13ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
- Genesis 25:2–4 ಆದಿಕಾಂಡ 25:2–4ಆಕೆಯು ಅವನಿಗೆ ಜಿಮ್ರಾನ್ ಯೊಕ್ಷಾನ್ ಮೆದಾನ್ ಮಿದ್ಯಾನ್ ಇಷ್ಬಾಕ್ ಶೂಹ ಎಂಬವರನ್ನು ಹೆತ್ತಳು. ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ. ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
- Jeremiah 49:28–33 ಯೆರೆಮೀಯ 49:28–33ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ. ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು. ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ. ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ. ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.