Jeremiah · chapter 25 · verse 26
Jeremiah 25:26 in Kannada
ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
Hattirada lliyoo dooradalliyoo obbara baliyalli obbari ruva uttaradikkina arasarellarigoo bhoomiya melbhaagadalliruvantha lokada ellaa raajya galigoo kudisidenu; sheshakina arasanu avara taruvaaya kudiyuvanu.
Jeremiah 25:26 in English
- King James Version (KJV)
- And all the kings of the north, far and near, one with another, and all the kingdoms of the world, which [are] upon the face of the earth: and the king of Sheshach shall drink after them.
- World English Bible (WEB)
- and all the kings of the north, far and near, one with another; and all the kingdoms of the world, which are on the surface of the earth. The king of Sheshach will drink after them.
- American Standard Version (ASV)
- and all the kings of the north, far and near, one with another; and all the kingdoms of the world, which are upon the face of the earth: and the king of Sheshach shall drink after them.
- Bible in Basic English (BBE)
- And all the kings of the north, far and near, one with another; and all the kingdoms of the world on the face of the earth.
- Darby Translation (DBY)
- and all the kings of the north, far and near, one with another; and all the kingdoms of the world, which are upon the face of the earth; and the king of Sheshach shall drink after them.
- Webster's Bible (WBS)
- And all the kings of the north, far and near, one with another, and all the kingdoms of the world, which [are] upon the face of the earth: and the king of Sheshach shall drink after them.
- Young's Literal Translation (YLT)
- And all the kings of the north, The near and the far off, one unto another, And all the kingdoms of the earth, That [are] on the face of the ground, And king Sheshach drinketh after them.
Read in context
- 24ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ
- 25ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
- 26ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
- 27ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
- 28ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
Cross references
- Jeremiah 51:41 ಯೆರೆಮೀಯ 51:41ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Isaiah 47:1–15 ಯೆಶಾಯ 47:1–15ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ. ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು. ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು. ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು. ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ. ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ. ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ. ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು. ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು. ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ. ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು. ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ. ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು. ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
- Revelation 18:1–24 ಪ್ರಕಟನೆ 18:1–24ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು. ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು. ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು. ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು. ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ. ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ. ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ. ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು. ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು. ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Daniel 5:1–31 ದಾನಿಯೇಲನು 5:1–31ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು. ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು. ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು. ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು. ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು. ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು. ಆಗ ಅರಸನ ಮತ್ತು ಅವನ ಪ್ರಭುಗಳ ಮಾತುಗಳಿಗಾಗಿ ರಾಣಿಯು ಔತಣದ ಮನೆಗೆ ಬಂದು ಮಾತನಾಡಿ ಹೇಳಿದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು. ನಿನ್ನ ಆಲೋ ಚನೆಗಳು ನಿನ್ನನ್ನು ಕಳವಳಪಡಿಸದಿರಲಿ; ನಿನ್ನ ಮುಖವು ಕಳೆಗುಂದದಿರಲಿ; ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು. ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು. ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ? ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ. ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು. ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು. ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು. ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು. ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು. ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ. ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು. ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್, ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ; ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ. ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು. ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು. ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು. ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Isaiah 13:1–14 ಯೆಶಾಯ 13:1–14ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ. ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ. ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು. ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು. ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು. ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು. ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ. ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು. ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು. ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು. ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
- Jeremiah 25:12 ಯೆರೆಮೀಯ 25:12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
- Ezekiel 32:30 ಯೆಹೆಜ್ಕೇಲನು 32:30ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
- Habakkuk 2:16 ಹಬಕ್ಕೂಕ 2:16ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
- Jeremiah 50:1–46 ಯೆರೆಮೀಯ 50:1–46ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು. ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ; ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ. ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು. ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು. ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು. ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ. ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು. ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ. ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು. ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ. ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ. ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು. ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ. ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು. ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ. ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ. ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು. ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು! ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ; ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು. ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ. ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು. ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು! ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು. ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ. ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು. ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು. ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ. ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು. ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು. ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು. ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ. ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ. ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು. ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು. ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು. ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು. ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
Original words (Hebrew)
- kings · H4428מֶלֶךְ melek
- north · H6828צָפוֹן tsâphôwn
- far · H7350רָחוֹק râchôwq
- near · H7138קָרוֹב qârôwb
- one · H376אִישׁ ʼîysh
- another · H251אָח ʼâch
- kingdoms · H4467מַמְלָכָה mamlâkâh
- world · H776אֶרֶץ ʼerets
- face · H6440פָּנִים pânîym
- earth · H127אֲדָמָה ʼădâmâh
- king · H4428מֶלֶךְ melek
- Sheshach · H8347שֵׁשַׁךְ Shêshak
- drink · H8354שָׁתָה shâthâh
- after · H310אַחַר ʼachar