Jeremiah · chapter 25 · verse 33
Jeremiah 25:33 in Kannada
ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
Aa divasadalli bhoomiya ee mereyinda bhoomiya aa mereya varege karta ninda konduhaakalpattavaru iruvaru; avari goskara golaaduvadilla; avarannu koodisuva dilla; avarannu hooniduvadilla; avaru bhoomiya mele gobbaravaaguvaru.
Jeremiah 25:33 in English
- King James Version (KJV)
- And the slain of the LORD shall be at that day from [one] end of the earth even unto the [other] end of the earth: they shall not be lamented, neither gathered, nor buried; they shall be dung upon the ground.
- World English Bible (WEB)
- The slain of the LORD will be at that day from one end of the earth even to the other end of the earth. They won’t be lamented. They won’t be gathered or buried. They will be dung on the surface of the ground.
- American Standard Version (ASV)
- And the slain of Jehovah shall be at that day from one end of the earth even unto the other end of the earth: they shall not be lamented, neither gathered, nor buried; they shall be dung upon the face of the ground.
- Bible in Basic English (BBE)
- And at that day, the bodies of those whom the Lord has put to death will be seen from one end of the earth even to the other end of the earth: there will be no weeping for them, their bodies will not be taken up or put to rest in the earth; they will be like waste on the face of the land.
- Darby Translation (DBY)
- And the slain of Jehovah shall [be] at that day from [one] end of the earth even unto the [other] end of the earth: they shall not be lamented, neither gathered, nor buried; they shall be dung upon the face of the ground.
- Webster's Bible (WBS)
- And the slain of the LORD shall be at that day from [one] end of the earth even to the [other] end of the earth: they shall not be lamented, neither gathered, nor buried; they shall be dung upon the ground.
- Young's Literal Translation (YLT)
- And the pierced of Jehovah have been in that day, From the end of the earth even unto the end of the earth, They are not lamented, nor gathered, nor buried, For dung on the face of the ground they are.
Read in context
- 31ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
- 32ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
- 33ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
- 34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
- 35ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು.
Cross references
- Isaiah 66:16 ಯೆಶಾಯ 66:16ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Jeremiah 8:2 ಯೆರೆಮೀಯ 8:2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- Psalm 79:3 ಕೀರ್ತನೆಗಳು 79:3ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.
- Jeremiah 16:4–7 ಯೆರೆಮೀಯ 16:4–7ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು. ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ. ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ. ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
- Isaiah 5:25 ಯೆಶಾಯ 5:25ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
- Revelation 14:19–20 ಪ್ರಕಟನೆ 14:19–20ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು. ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- Isaiah 34:2–8 ಯೆಶಾಯ 34:2–8ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ. ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
- Revelation 19:17–21 ಪ್ರಕಟನೆ 19:17–21ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Jeremiah 13:12–14 ಯೆರೆಮೀಯ 13:12–14ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು. ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
- Jeremiah 25:18–26 ಯೆರೆಮೀಯ 25:18–26ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು. ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
- Psalm 83:10 ಕೀರ್ತನೆಗಳು 83:10ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
- Zephaniah 2:12 ಚೆಫನ್ಯ 2:12ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;