Jeremiah · chapter 25 · verse 35
Jeremiah 25:35 in Kannada
ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು.
Aaga kurubarige odihoguvadakkoo mandeya pramukharige tappisikolluvadakkoo maargavillade hoguvadu.
Jeremiah 25:35 in English
- King James Version (KJV)
- And the shepherds shall have no way to flee, nor the principal of the flock to escape.
- World English Bible (WEB)
- The shepherds will have no way to flee. The leader of the flock will have no escape.
- American Standard Version (ASV)
- And the shepherds shall have no way to flee, nor the principal of the flock to escape.
- Bible in Basic English (BBE)
- There will be no way of flight for the keepers of sheep, no road for the chiefs of the flock to get away safely.
- Darby Translation (DBY)
- And refuge shall perish from the shepherds, and escape from the noble ones of the flock.
- Webster's Bible (WBS)
- And the shepherds shall have no way to flee, nor the principal of the flock to escape.
- Young's Literal Translation (YLT)
- And perished hath refuge from the shepherds, And escape from the honourable of the flock.
Read in context
- 33ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
- 34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
- 35ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು.
- 36ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
- 37ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು.ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
Cross references
- Job 11:20 ಯೋಬನು 11:20ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- Amos 2:14 ಆಮೋಸ 2:14ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
- Revelation 19:19–21 ಪ್ರಕಟನೆ 19:19–21ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Daniel 5:30 ದಾನಿಯೇಲನು 5:30ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Jeremiah 48:44 ಯೆರೆಮೀಯ 48:44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- Isaiah 24:21–23 ಯೆಶಾಯ 24:21–23ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು. ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು. ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Isaiah 2:12–22 ಯೆಶಾಯ 2:12–22ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು. ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು. ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು. ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು. ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು? ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Jeremiah 34:3 ಯೆರೆಮೀಯ 34:3ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
- Jeremiah 32:4 ಯೆರೆಮೀಯ 32:4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
- Amos 9:1–3 ಆಮೋಸ 9:1–3ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ. ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
- Ezekiel 17:18 ಯೆಹೆಜ್ಕೇಲನು 17:18ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.
- Jeremiah 38:23 ಯೆರೆಮೀಯ 38:23ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.