Jeremiah · chapter 25 · verse 4
Jeremiah 25:4 in Kannada
ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
Idallade kartanu tanna sevakaraada pravaadigalannellaa nimma balige kaluhisiddaane, beligge eddu kaluhisiddaane; aadare neevu kelalilla, kelu vadakke nimma kivigodalilla.
Jeremiah 25:4 in English
- King James Version (KJV)
- And the LORD hath sent unto you all his servants the prophets, rising early and sending [them;] but ye have not hearkened, nor inclined your ear to hear.
- World English Bible (WEB)
- The LORD has sent to you all his servants the prophets, rising up early and sending them (but you have not listened or inclined your ear to hear),
- American Standard Version (ASV)
- And Jehovah hath sent unto you all his servants the prophets, rising up early and sending them, (but ye have not hearkened, nor inclined your ear to hear),
- Bible in Basic English (BBE)
- And the Lord has sent to you all his servants the prophets, getting up early and sending them; but you have not given attention and your ear has not been open to give hearing;
- Darby Translation (DBY)
- And Jehovah hath sent unto you all his servants the prophets, rising early and sending; but ye have not hearkened, nor inclined your ear to hear,
- Webster's Bible (WBS)
- And the LORD hath sent to you all his servants the prophets, rising early and sending [them] ; but ye have not hearkened, nor inclined your ear to hear.
- Young's Literal Translation (YLT)
- And Jehovah hath sent unto you all His servants, the prophets, rising early and sending, and ye have not hearkened, nor inclined your ear to hear, saying:
Read in context
- 2ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ--
- 3ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
- 4ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
- 5ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
- 6ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
Cross references
- Jeremiah 25:3 ಯೆರೆಮೀಯ 25:3ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
- Jeremiah 26:5 ಯೆರೆಮೀಯ 26:5ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ
- Jeremiah 19:15 ಯೆರೆಮೀಯ 19:15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- Zechariah 7:11–12 ಜೆಕರ್ಯ 7:11–12ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
- 2 Chronicles 36:15–16 2 ಪೂರ್ವಕಾಲವೃತ್ತಾಂತ 36:15–16ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Jeremiah 7:24–26 ಯೆರೆಮೀಯ 7:24–26ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು. ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು. ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
- Jeremiah 22:21 ಯೆರೆಮೀಯ 22:21ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
- Jeremiah 13:10–11 ಯೆರೆಮೀಯ 13:10–11ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು. ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
- Jeremiah 18:12 ಯೆರೆಮೀಯ 18:12ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
- Jeremiah 11:7–10 ಯೆರೆಮೀಯ 11:7–10ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು, ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ. ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
- Jeremiah 29:19 ಯೆರೆಮೀಯ 29:19ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.
- Jeremiah 17:23 ಯೆರೆಮೀಯ 17:23ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.