Jeremiah · chapter 26 · verse 24
Jeremiah 26:24 in Kannada
ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
Aadaagyoo avaru yereviాyanannu janara kaige oppisi kondu haakisada haage shaaphaanana maganaada aheekaamana sahaayavu avanige ittu.
Jeremiah 26:24 in English
- King James Version (KJV)
- Nevertheless the hand of Ahikam the son of Shaphan was with Jeremiah, that they should not give him into the hand of the people to put him to death.
- World English Bible (WEB)
- But the hand of Ahikam the son of Shaphan was with Jeremiah, so that they didn’t give him into the hand of the people to put him to death.
- American Standard Version (ASV)
- But the hand of Ahikam the son of Shaphan was with Jeremiah, that they should not give him into the hand of the people to put him to death.
- Bible in Basic English (BBE)
- But Ahikam, the son of Shaphan, gave Jeremiah his help, so that he was not given into the hands of the people to be put to death.
- Darby Translation (DBY)
- — Nevertheless the hand of Ahikam the son of Shaphan was with Jeremiah, that they should not give him into the hand of the people to put him to death.
- Webster's Bible (WBS)
- Nevertheless the hand of Ahikam the son of Shaphan was with Jeremiah, that they should not give him into the hand of the people to put him to death.
- Young's Literal Translation (YLT)
- Only, the hand of Ahikam son of Shaphan hath been with Jeremiah so as not to give him up into the hand of the people to put him to death.
Read in context
- 22ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
- 23ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- 24ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
Cross references
- 1 Kings 18:4 1 ಅರಸುಗಳು 18:4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
- Jeremiah 1:18–19 ಯೆರೆಮೀಯ 1:18–19ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ. ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- 2 Kings 22:12–14 2 ಅರಸುಗಳು 22:12–14ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ-- ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು. ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
- Jeremiah 40:5–7 ಯೆರೆಮೀಯ 40:5–7ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು. ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು. ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
- Jeremiah 39:14 ಯೆರೆಮೀಯ 39:14ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
- Isaiah 37:32–33 ಯೆಶಾಯ 37:32–33ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು. ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
- Acts 27:43 ಅಪೊಸ್ತಲರ ಕೃತ್ಯಗಳು 27:43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
- Acts 25:3–4 ಅಪೊಸ್ತಲರ ಕೃತ್ಯಗಳು 25:3–4ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು. ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.
- 2 Kings 25:22 2 ಅರಸುಗಳು 25:22ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
- Jeremiah 15:15–21 ಯೆರೆಮೀಯ 15:15–21ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ. ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ. ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ. ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ. ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ. ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ. ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- 2 Chronicles 34:20 2 ಪೂರ್ವಕಾಲವೃತ್ತಾಂತ 34:20ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--
- Acts 23:10 ಅಪೊಸ್ತಲರ ಕೃತ್ಯಗಳು 23:10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.