Jeremiah · chapter 26 · verse 3
Jeremiah 26:3 in Kannada
ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
Ondu vele avaru keli naanu avara krutyagala kettatanada nimitta avarige maaduvadakke aalochisida kedina vishaya pashchaattaapapaduva haage tamma tamma ketta maarga vannu bittu tirugikondaaru.
Jeremiah 26:3 in English
- King James Version (KJV)
- If so be they will hearken, and turn every man from his evil way, that I may repent me of the evil, which I purpose to do unto them because of the evil of their doings.
- World English Bible (WEB)
- It may be they will listen, and every man turn from his evil way, that I may relent from the evil which I intend to do to them because of the evil of their doings.’”
- American Standard Version (ASV)
- It may be they will hearken, and turn every man from his evil way; that I may repent me of the evil which I purpose to do unto them because of the evil of their doings.
- Bible in Basic English (BBE)
- It may be that they will give ear, and that every man will be turned from his evil way, so that my purpose of sending evil on them because of the evil of their doings may be changed.
- Darby Translation (DBY)
- Peradventure they will hearken, and turn every man from his evil way, that I may repent me of the evil which I purpose to do unto them because of the wickedness of their doings.
- Webster's Bible (WBS)
- It may be they will hearken, and turn every man from his evil way, that I may repent of the evil, which I purpose to do to them because of the evil of their doings.
- Young's Literal Translation (YLT)
- If so be they hearken, and turn back each from his evil way, then I have repented concerning the evil that I am thinking of doing to them, because of the evil of their doings.
Read in context
- 1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.
- 2ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
- 3ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
- 4ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
- 5ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ
Cross references
- Jeremiah 36:3 ಯೆರೆಮೀಯ 36:3ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.
- Isaiah 1:16–19 ಯೆಶಾಯ 1:16–19ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- Jeremiah 18:7–10 ಯೆರೆಮೀಯ 18:7–10ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು. ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
- Jonah 4:2 ಯೋನ 4:2ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
- Jonah 3:8–10 ಯೋನ 3:8–10ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ. ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- Jeremiah 36:7 ಯೆರೆಮೀಯ 36:7ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
- Ezekiel 18:27–30 ಯೆಹೆಜ್ಕೇಲನು 18:27–30ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು. ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು. ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ. ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
- 1 Kings 21:27 1 ಅರಸುಗಳು 21:27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
- 1 Kings 21:29 1 ಅರಸುಗಳು 21:29ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.