Jeremiah · chapter 26 · verse 6
Jeremiah 26:6 in Kannada
ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
Aaga naanu ee maneyannu shilovina haage maaduttene; ee pattanavannu bhoomiya ellaa janaangagalige shaapakke guriyaaguvante maaduttene andanu.
Jeremiah 26:6 in English
- King James Version (KJV)
- Then will I make this house like Shiloh, and will make this city a curse to all the nations of the earth.
- World English Bible (WEB)
- then I will make this house like Shiloh, and will make this city a curse to all the nations of the earth.’”
- American Standard Version (ASV)
- then will I make this house like Shiloh, and will make this city a curse to all the nations of the earth.
- Bible in Basic English (BBE)
- Then I will make this house like Shiloh, and will make this town a curse to all the nations of the earth.
- Darby Translation (DBY)
- — then will I make this house like Shiloh, and will make this city a curse to all the nations of the earth.
- Webster's Bible (WBS)
- Then will I make this house like Shiloh, and will make this city a curse to all the nations of the earth.
- Young's Literal Translation (YLT)
- Then I have given up this house as Shiloh, and this city I give up for a reviling to all nations of the earth.'
Read in context
- 4ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
- 5ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ
- 6ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
- 7ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು.
- 8ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
Cross references
- 2 Kings 22:19 2 ಅರಸುಗಳು 22:19ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Isaiah 65:15 ಯೆಶಾಯ 65:15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- Jeremiah 25:18 ಯೆರೆಮೀಯ 25:18ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
- 1 Samuel 4:10–12 1 ಸಮುವೇಲನು 4:10–12ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು. ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು. ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
- Jeremiah 7:12–14 ಯೆರೆಮೀಯ 7:12–14ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ. ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ. ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
- 1 Samuel 4:19–22 1 ಸಮುವೇಲನು 4:19–22ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು. ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು. ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು. ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
- Daniel 9:11 ದಾನಿಯೇಲನು 9:11ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
- Psalm 78:60–64 ಕೀರ್ತನೆಗಳು 78:60–64ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು, ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು. ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು. ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ. ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
- Jeremiah 44:8–12 ಯೆರೆಮೀಯ 44:8–12ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ? ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ? ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ. ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ. ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
- Jeremiah 44:22 ಯೆರೆಮೀಯ 44:22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
- Isaiah 43:28 ಯೆಶಾಯ 43:28ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.