Jeremiah · chapter 27 · verse 14
Jeremiah 27:14 in Kannada
ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
Aadadarinda baabelina arasanige neevu sevemaadabedirendu nimage heluva pravaadigala vaakyagalige kivigodabediri; avaru nimage sullannu pravaadisuttaare.
Jeremiah 27:14 in English
- King James Version (KJV)
- Therefore hearken not unto the words of the prophets that speak unto you, saying, Ye shall not serve the king of Babylon: for they prophesy a lie unto you.
- World English Bible (WEB)
- Don’t listen to the words of the prophets who speak to you, saying, ‘You shall not serve the king of Babylon;’ for they prophesy a lie to you.
- American Standard Version (ASV)
- And hearken not unto the words of the prophets that speak unto you, saying, Ye shall not serve the king of Babylon; for they prophesy a lie unto you.
- Bible in Basic English (BBE)
- And you are not to give ear to the prophets who say to you, You will not become servants of the king of Babylon: for what they say is not true.
- Darby Translation (DBY)
- And hearken not unto the words of the prophets that speak unto you, saying, Ye shall not serve the king of Babylon; for they prophesy falsehood unto you.
- Webster's Bible (WBS)
- Therefore hearken not to the words of the prophets that speak to you, saying, Ye shall not serve the king of Babylon; for they prophesy a lie to you.
- Young's Literal Translation (YLT)
- 'And ye do not hearken unto the words of the prophets who are speaking unto you, saying, Ye do not serve the king of Babylon, — for falsehood they are prophesying to you.
Read in context
- 12ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
- 13ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?
- 14ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- 15ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
- 16ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
Cross references
- Jeremiah 14:14 ಯೆರೆಮೀಯ 14:14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
- Jeremiah 29:8–9 ಯೆರೆಮೀಯ 29:8–9ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ. ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- Jeremiah 23:21 ಯೆರೆಮೀಯ 23:21ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- Isaiah 28:10–13 ಯೆಶಾಯ 28:10–13ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ. ತೊದಲು ಮಾತಿನವರು ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರ ಸಂಗಡ ಮಾತನಾಡುತ್ತಾನೆ. ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ. ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
- Ezekiel 13:22–23 ಯೆಹೆಜ್ಕೇಲನು 13:22–23ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Jeremiah 28:15 ಯೆರೆಮೀಯ 28:15ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
- Micah 2:11 ಮೀಕ 2:11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Philippians 3:2 ಫಿಲಿಪ್ಪಿಯವರಿಗೆ 3:2ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.