Jeremiah · chapter 27 · verse 19
Jeremiah 27:19 in Kannada
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ
Baabelina arasanaada nebookadnechcharanu yehoo dada arasanaada yehoyaakeemana maganaada yekonyayanannoo yehoodada mattu yeroosa lemina shreshtharellarannoo yeroosalemininda baabelige sereyaagi
Jeremiah 27:19 in English
- King James Version (KJV)
- For thus saith the LORD of hosts concerning the pillars, and concerning the sea, and concerning the bases, and concerning the residue of the vessels that remain in this city,
- World English Bible (WEB)
- For the LORD of Armies says concerning the pillars, concerning the sea, concerning the bases, and concerning the rest of the vessels that are left in this city,
- American Standard Version (ASV)
- For thus saith Jehovah of hosts concerning the pillars, and concerning the sea, and concerning the bases, and concerning the residue of the vessels that are left in this city,
- Bible in Basic English (BBE)
- For this is what the Lord has said about the rest of the vessels which are still in this town,
- Darby Translation (DBY)
- For thus saith Jehovah of hosts concerning the pillars, and concerning the sea, and concerning the bases, and concerning the rest of the vessels that are left in this city,
- Webster's Bible (WBS)
- For thus saith the LORD of hosts concerning the pillars, and concerning the sea, and concerning the bases, and concerning the residue of the vessels that remain in this city,
- Young's Literal Translation (YLT)
- For thus said Jehovah of Hosts concerning the pillars, and concerning the sea, and concerning the bases, and concerning the rest of the vessels that are left in this city,
Read in context
- 17ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು?
- 18ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
- 19ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ
- 20ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
- 21ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
Cross references
- 2 Kings 25:13 2 ಅರಸುಗಳು 25:13ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
- Jeremiah 52:17–23 ಯೆರೆಮೀಯ 52:17–23ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು. ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು. ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು. ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು. ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು; ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
- 2 Kings 25:17 2 ಅರಸುಗಳು 25:17ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
- 2 Chronicles 4:2–16 2 ಪೂರ್ವಕಾಲವೃತ್ತಾಂತ 4:2–16ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು. ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು. ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು, ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು. ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು. ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು. ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು. ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು. ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು. ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು. ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
- 1 Kings 7:15–22 1 ಅರಸುಗಳು 7:15–22ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು. ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು. ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು. ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು. ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು. ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು. ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.