Jeremiah · chapter 27 · verse 7
Jeremiah 27:7 in Kannada
ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
Janaangagalellaa avanigoo avana maganigoo avana magana maganigoo avana deshakke kaala saviాpisuva varegoo sevisuvavu. Aamele bahala janaangagaloo dodda arasaroo avaninda seve maadisikolluvaru.
Jeremiah 27:7 in English
- King James Version (KJV)
- And all nations shall serve him, and his son, and his son’s son, until the very time of his land come: and then many nations and great kings shall serve themselves of him.
- World English Bible (WEB)
- All the nations will serve him, his son, and his son’s son, until the time of his own land comes. Then many nations and great kings will make him their bondservant.
- American Standard Version (ASV)
- And all the nations shall serve him, and his son, and his son’s son, until the time of his own land come: and then many nations and great kings shall make him their bondman.
- Bible in Basic English (BBE)
- And all the nations will be servants to him and to his son and to his son's son, till the time comes for his land to be overcome: and then a number of nations and great kings will take it for their use.
- Darby Translation (DBY)
- And all the nations shall serve him, and his son, and his son's son, until the time of his land also come, when many nations and great kings shall reduce him to servitude.
- Webster's Bible (WBS)
- And all nations shall serve him, and his son, and his son's son, until the very time of his land shall come: and then many nations and great kings shall bring him into subjection.
- Young's Literal Translation (YLT)
- And served him have all the nations, and his son, and his son's son, till the coming in of the time of his land, also it; and done service for him have many nations and great kings.
Read in context
- 5ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
- 6ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
- 7ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- 8ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
- 9ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
Cross references
- Jeremiah 52:31 ಯೆರೆಮೀಯ 52:31ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
- Revelation 13:5–10 ಪ್ರಕಟನೆ 13:5–10ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು. ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು. ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು. ಕಿವಿಯುಳ್ಳವನು ಕೇಳಲಿ. ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
- Isaiah 14:4–6 ಯೆಶಾಯ 14:4–6ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ. ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
- Jeremiah 25:11–14 ಯೆರೆಮೀಯ 25:11–14ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು. ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು. ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು. ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
- Zechariah 2:8–9 ಜೆಕರ್ಯ 2:8–9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
- Daniel 5:25–31 ದಾನಿಯೇಲನು 5:25–31ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್, ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ; ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ. ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು. ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು. ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು. ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Isaiah 14:22–23 ಯೆಶಾಯ 14:22–23ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Revelation 16:19 ಪ್ರಕಟನೆ 16:19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- Isaiah 13:1 ಯೆಶಾಯ 13:1ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
- Revelation 14:15–20 ಪ್ರಕಟನೆ 14:15–20ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು. ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು. ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು. ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- Habakkuk 2:7 ಹಬಕ್ಕೂಕ 2:7ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
- 2 Chronicles 36:20–21 2 ಪೂರ್ವಕಾಲವೃತ್ತಾಂತ 36:20–21ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.