Jeremiah · chapter 28 · verse 16
Jeremiah 28:16 in Kannada
ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
Aadadarinda kartanu heege helu ttaaneigo, naanu ninnannu bhoomiya melininda bisaadi biduttene; ee varusha neenu saayuvi; neenu kartanige virodhavaagi droha bagediddee andanu.haageye hananyanu ade varushadalli elane tingalalli sattanu.
Jeremiah 28:16 in English
- King James Version (KJV)
- Therefore thus saith the LORD; Behold, I will cast thee from off the face of the earth: this year thou shalt die, because thou hast taught rebellion against the LORD.
- World English Bible (WEB)
- Therefore the LORD says, ‘Behold, I will send you away from off the surface of the earth. This year you will die, because you have spoken rebellion against the LORD.’”
- American Standard Version (ASV)
- Therefore thus saith Jehovah, Behold, I will send thee away from off the face of the earth: this year thou shalt die, because thou hast spoken rebellion against Jehovah.
- Bible in Basic English (BBE)
- For this reason the Lord has said, See, I will send you away from off the face of the earth: this year death will overtake you, because you have said words against the Lord.
- Darby Translation (DBY)
- Therefore thus saith Jehovah: Behold, I will cast thee from off the face of the earth: this year thou shalt die, for thou hast spoken revolt against Jehovah.
- Webster's Bible (WBS)
- Therefore thus saith the LORD; Behold, I will cast thee from off the face of the earth: this year thou shalt die, because thou hast taught rebellion against the LORD.
- Young's Literal Translation (YLT)
- Therefore thus said Jehovah, Lo, I am casting thee from off the face of the ground; this year thou diest, for apostasy thou hast spoken concerning Jehovah.'
Read in context
- 14ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
- 15ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
- 16ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- 17ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
Cross references
- Jeremiah 29:32 ಯೆರೆಮೀಯ 29:32ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
- Genesis 7:4 ಆದಿಕಾಂಡ 7:4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
- 1 Kings 13:34 1 ಅರಸುಗಳು 13:34ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- Exodus 32:12 ವಿಮೋಚನಕಾಂಡ 32:12ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
- Jeremiah 20:6 ಯೆರೆಮೀಯ 20:6ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
- Deuteronomy 6:15 ಧರ್ಮೋಪದೇಶಕಾಂಡ 6:15(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
- Acts 13:8–11 ಅಪೊಸ್ತಲರ ಕೃತ್ಯಗಳು 13:8–11ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ). ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ-- ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ? ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
- Deuteronomy 13:5–11 ಧರ್ಮೋಪದೇಶಕಾಂಡ 13:5–11ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು. ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು. ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು. ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು. ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
- Ezekiel 13:11–12 ಯೆಹೆಜ್ಕೇಲನು 13:11–12ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ?
- Numbers 29:32 ಅರಣ್ಯಕಾಂಡ 29:32ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
- Jeremiah 28:3 ಯೆರೆಮೀಯ 28:3ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
- Numbers 16:28–35 ಅರಣ್ಯಕಾಂಡ 16:28–35ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ. ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ. ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು. ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು. ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.