Jeremiah · chapter 28 · verse 8
Jeremiah 28:8 in Kannada
ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
Munche idda hindina pravaadigalu aneka deshagaligoo dodda raajya galigoo virodhavaagi yuddhavannoo kedannoo jaadyavannoo kuritu pravaadisidaru.
Jeremiah 28:8 in English
- King James Version (KJV)
- The prophets that have been before me and before thee of old prophesied both against many countries, and against great kingdoms, of war, and of evil, and of pestilence.
- World English Bible (WEB)
- The prophets who have been before me and before you of old prophesied against many countries, and against great kingdoms, of war, of evil, and of pestilence.
- American Standard Version (ASV)
- The prophets that have been before me and before thee of old prophesied against many countries, and against great kingdoms, of war, and of evil, and of pestilence.
- Bible in Basic English (BBE)
- The prophets, who were before me and before you, from early times gave word to a number of countries and great kingdoms about war and destruction and disease.
- Darby Translation (DBY)
- The prophets that have been before me and before thee of old, prophesied also concerning many countries and concerning great kingdoms, of war, and of evil, and of pestilence.
- Webster's Bible (WBS)
- The prophets that have been before me and before thee of old prophesied both against many countries, and against great kingdoms, of war, and of evil, and of pestilence.
- Young's Literal Translation (YLT)
- The prophets who have been before me, and before thee, from of old, even they prophesy concerning many lands, and concerning great kingdoms, of battle, and of evil, and of pestilence.
Read in context
- 6ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
- 7ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
- 8ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
- 9ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
- 10ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
Cross references
- Deuteronomy 4:26–27 ಧರ್ಮೋಪದೇಶಕಾಂಡ 4:26–27ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ. ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- 1 Kings 22:8 1 ಅರಸುಗಳು 22:8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- 1 Kings 14:7–15 1 ಅರಸುಗಳು 14:7–15ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ. ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ. ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ. ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ. ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು. ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು. ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು. ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.
- Leviticus 26:14–46 ಯಾಜಕಕಾಂಡ 26:14–46ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ. ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು. ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು. ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು. ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು. ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ. ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ. ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು. ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ. ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು. ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು. ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು. ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು. ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು. ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು. ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು. ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ. ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ. ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- Isaiah 24:1–23 ಯೆಶಾಯ 24:1–23ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ. ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು. ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ. ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ. ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ. ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು. ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು. ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ. ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ. ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ). ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ. ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ. ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು. ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು. ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Micah 3:8–12 ಮೀಕ 3:8–12ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ. ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ, ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು. ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Deuteronomy 31:16–17 ಧರ್ಮೋಪದೇಶಕಾಂಡ 31:16–17ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು. ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
- 1 Kings 21:18–24 1 ಅರಸುಗಳು 21:18–24ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ. ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು. ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು; ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು. ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು. ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು. ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
- Isaiah 5:1–8 ಯೆಶಾಯ 5:1–8ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ. ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು. ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ? ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು. ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು. ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
- Nahum 1:1–3 ನಹೂಮ 1:1–3ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು. ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ. ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- Deuteronomy 32:15–44 ಧರ್ಮೋಪದೇಶಕಾಂಡ 32:15–44ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು. ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ. ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು! ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು? ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ. ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ. ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ. ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ? ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ. ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು. ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ, ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ. ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ. ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ. ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
Original words (Hebrew)
- prophets · H5030נָבִיא nâbîyʼ
- before · H6440פָּנִים pânîym
- before · H6440פָּנִים pânîym
- old · H5769עוֹלָם ʻôwlâm
- prophesied · H5012נָבָא nâbâʼ
- many · H7227רַב rab
- countries · H776אֶרֶץ ʼerets
- great · H1419גָּדוֹל gâdôwl
- kingdoms · H4467מַמְלָכָה mamlâkâh
- war · H4421מִלְחָמָה milchâmâh
- evil · H7451רַע raʻ
- pestilence · H1698דֶּבֶר deber