Jeremiah · chapter 29 · verse 11
Jeremiah 29:11 in Kannada
ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
Naanu nimmannu kuritu maaduva aalochane galannu ballenendu kartanu annuttaane; avu kedi galla, samaadhaanakkiruva aalochanegalu; neevu nireekshisidda sthitiyannu koduvavugale.
Jeremiah 29:11 in English
- King James Version (KJV)
- For I know the thoughts that I think toward you, saith the LORD, thoughts of peace, and not of evil, to give you an expected end.
- World English Bible (WEB)
- For I know the thoughts that I think toward you,” says the LORD, “thoughts of peace, and not of evil, to give you hope and a future.
- American Standard Version (ASV)
- For I know the thoughts that I think toward you, saith Jehovah, thoughts of peace, and not of evil, to give you hope in your latter end.
- Bible in Basic English (BBE)
- For I am conscious of my thoughts about you, says the Lord, thoughts of peace and not of evil, to give you hope at the end.
- Darby Translation (DBY)
- For I know the thoughts that I think toward you, saith Jehovah, thoughts of peace, and not of evil, to give you in your latter end a hope.
- Webster's Bible (WBS)
- For I know the thoughts that I think towards you, saith the LORD, thoughts of peace, and not of evil, to give you an expected end.
- Young's Literal Translation (YLT)
- For I have known the thoughts that I am thinking towards you — an affirmation of Jehovah; thoughts of peace, and not of evil, to give to you posterity and hope.
Read in context
- 9ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
- 10ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
- 11ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
- 12ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
- 13ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
Cross references
- Isaiah 55:8–12 ಯೆಶಾಯ 55:8–12ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ. ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು. ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Psalm 33:11 ಕೀರ್ತನೆಗಳು 33:11ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
- Micah 4:12 ಮೀಕ 4:12ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- Psalm 40:5 ಕೀರ್ತನೆಗಳು 40:5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- Job 23:13 ಯೋಬನು 23:13ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
- Lamentations 3:26 ಪ್ರಲಾಪಗಳು 3:26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Ezekiel 34:11–31 ಯೆಹೆಜ್ಕೇಲನು 34:11–31ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ. ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು. ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು. ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು. ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು. ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು. ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ? ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು. ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ. ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ. ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು. ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ; ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು. ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು; ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು; ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು. ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ. ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ. ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 3:12–19 ಯೆರೆಮೀಯ 3:12–19ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ. ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ. ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು. ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು. ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ. ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು. ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು. ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Jeremiah 31:1–33 ಯೆರೆಮೀಯ 31:1–33ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು. ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ. ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ. ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು. ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು. ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ. ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು. ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ. ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು. ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ. ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ. ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು. ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ; ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು. ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು. ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ. ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು. ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು. ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು. ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ. ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು. ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು. ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ. ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ. ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು. ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Joel 2:28–32 ಯೋವೇಲ 2:28–32ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು. ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು. ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು. ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Isaiah 40:1–31 ಯೆಶಾಯ 40:1–31ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ. ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು. ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು. ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ. ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ. ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು. ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು. ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ. ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು. ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು? ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು? ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ. ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು. ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ. ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ? ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು. ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು. ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ? ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ. ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2 ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು. ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ. ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು. ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ? ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ. ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.