Jeremiah · chapter 29 · verse 12
Jeremiah 29:12 in Kannada
ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
Aaga nannannu kareyuviri; hogi nanage praarthane maaduviri; nimage kivigoduvenu.
Jeremiah 29:12 in English
- King James Version (KJV)
- Then shall ye call upon me, and ye shall go and pray unto me, and I will hearken unto you.
- World English Bible (WEB)
- You shall call on me, and you shall go and pray to me, and I will listen to you.
- American Standard Version (ASV)
- And ye shall call upon me, and ye shall go and pray unto me, and I will hearken unto you.
- Bible in Basic English (BBE)
- And you will go on crying to me and making prayer to me, and I will give ear to you.
- Darby Translation (DBY)
- And ye shall call upon me, and ye shall go and pray unto me, and I will hearken unto you;
- Webster's Bible (WBS)
- Then shall ye call upon me, and ye shall go and pray to me, and I will hearken to you.
- Young's Literal Translation (YLT)
- 'And ye have called Me, and have gone, and have prayed unto Me, and I have hearkened unto you,
Read in context
- 10ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
- 11ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
- 12ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
- 13ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- 14ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
Cross references
- Matthew 7:7–8 ಮತ್ತಾಯನು 7:7–8ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Psalm 145:19 ಕೀರ್ತನೆಗಳು 145:19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Jeremiah 31:9 ಯೆರೆಮೀಯ 31:9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- Isaiah 30:19 ಯೆಶಾಯ 30:19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
- Daniel 9:3–19 ದಾನಿಯೇಲನು 9:3–19ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು. ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ, ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ. ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ. ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ. ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ. ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Psalm 102:16–17 ಕೀರ್ತನೆಗಳು 102:16–17ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು. ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.