Jeremiah · chapter 29 · verse 13
Jeremiah 29:13 in Kannada
ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
Nannannu hudukuviri; poorna hrudayadinda nannannu hudukuvaaga nannannu kandukolluviri.
Jeremiah 29:13 in English
- King James Version (KJV)
- And ye shall seek me, and find [me], when ye shall search for me with all your heart.
- World English Bible (WEB)
- You shall seek me and find me, when you search for me with all your heart.
- American Standard Version (ASV)
- And ye shall seek me, and find me, when ye shall search for me with all your heart.
- Bible in Basic English (BBE)
- And you will be searching for me and I will be there, when you have gone after me with all your heart.
- Darby Translation (DBY)
- and ye shall seek me and find me, for ye shall search for me with all your heart,
- Webster's Bible (WBS)
- And ye shall seek me, and find [me] , when ye shall search for me with all your heart.
- Young's Literal Translation (YLT)
- And ye have sought Me, and have found, for ye seek Me with all your heart;
Read in context
- 11ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
- 12ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
- 13ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- 14ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- 15ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
Cross references
- Deuteronomy 4:29–31 ಧರ್ಮೋಪದೇಶಕಾಂಡ 4:29–31ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Psalm 119:2 ಕೀರ್ತನೆಗಳು 119:2ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
- Matthew 7:7 ಮತ್ತಾಯನು 7:7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
- Psalm 119:10 ಕೀರ್ತನೆಗಳು 119:10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
- Jeremiah 24:7 ಯೆರೆಮೀಯ 24:7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- Joel 2:12 ಯೋವೇಲ 2:12ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
- Luke 11:9–10 ಲೂಕನು 11:9–10ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Psalm 119:145 ಕೀರ್ತನೆಗಳು 119:145ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
- 2 Chronicles 31:21 2 ಪೂರ್ವಕಾಲವೃತ್ತಾಂತ 31:21ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
- Psalm 119:58 ಕೀರ್ತನೆಗಳು 119:58ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.