Jeremiah · chapter 29 · verse 17
Jeremiah 29:17 in Kannada
ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
Sainyagala kartanu heluvadenandare-- igo, naanu avaralli kattiyannoo kshaamavannoo jaadyavannoo kaluhisi, avarannu kettavarannaagi maadi ruvadarinda, tinnakoodada asahyavaada anjoora gala haage maaduvenu.
Jeremiah 29:17 in English
- King James Version (KJV)
- Thus saith the LORD of hosts; Behold, I will send upon them the sword, the famine, and the pestilence, and will make them like vile figs, that cannot be eaten, they are so evil.
- World English Bible (WEB)
- the LORD of Armies says: “Behold, I will send on them the sword, the famine, and the pestilence, and will make them like rotten figs that can’t be eaten, they are so bad.
- American Standard Version (ASV)
- thus saith Jehovah of hosts: Behold, I will send upon them the sword, the famine, and the pestilence, and will make them like vile figs, that cannot be eaten, they are so bad.
- Bible in Basic English (BBE)
- This is what the Lord of armies has said: See, I will send on them the sword and need of food and disease, and will make them like bad figs, which are of no use for food, they are so bad.
- Darby Translation (DBY)
- thus saith Jehovah of hosts: Behold, I will send against them the sword, the famine, and the pestilence, and will make them like the vile figs, that cannot be eaten for badness.
- Webster's Bible (WBS)
- Thus saith the LORD of hosts; Behold, I will send upon them the sword, the famine, and the pestilence, and will make them like vile figs, that cannot be eaten, they are so bad.
- Young's Literal Translation (YLT)
- Thus said Jehovah of Hosts, Lo, I am sending among them the sword, the famine, and the pestilence, and I have given them up as figs that [are] vile, that are not eaten for badness.
Read in context
- 15ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
- 16ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
- 17ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
- 18ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
- 19ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.
Cross references
- Jeremiah 24:8–10 ಯೆರೆಮೀಯ 24:8–10ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ. ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು. ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Jeremiah 29:18 ಯೆರೆಮೀಯ 29:18ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
- Jeremiah 24:1–3 ಯೆರೆಮೀಯ 24:1–3ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು. ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು. ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
- Jeremiah 15:2–3 ಯೆರೆಮೀಯ 15:2–3ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- Jeremiah 43:11 ಯೆರೆಮೀಯ 43:11ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
- Ezekiel 14:12–21 ಯೆಹೆಜ್ಕೇಲನು 14:12–21ಕರ್ತನ ವಾಕ್ಯವು ನನಗೆ ತಿರಿಗಿ ಬಂದು ಹೇಳಿದ್ದೇ ನಂದರೆ-- ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ, ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು; ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ, ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Jeremiah 52:6 ಯೆರೆಮೀಯ 52:6ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
- Luke 21:11 ಲೂಕನು 21:11ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
- Luke 21:23 ಲೂಕನು 21:23ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
- Jeremiah 34:17–22 ಯೆರೆಮೀಯ 34:17–22ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು. ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು. ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು. ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Jeremiah 27:8 ಯೆರೆಮೀಯ 27:8ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
- Ezekiel 5:12–17 ಯೆಹೆಜ್ಕೇಲನು 5:12–17ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು. ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು. ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ. ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ. ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ. ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.