Jeremiah · chapter 29 · verse 25
Jeremiah 29:25 in Kannada
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
Israayelina devaraada sainyagala kartanu heege heluttaane--neenu ninna hesarinalli yeroosaleminavarellarigoo yaajakanaada maase yana maganaagiruva chephanyanigoo yaajakarellarigoo patragalannu kaluhisidiyallaa?
Jeremiah 29:25 in English
- King James Version (KJV)
- Thus speaketh the LORD of hosts, the God of Israel, saying, Because thou hast sent letters in thy name unto all the people that [are] at Jerusalem, and to Zephaniah the son of Maaseiah the priest, and to all the priests, saying,
- World English Bible (WEB)
- “The LORD of Armies, the God of Israel, says, ‘Because you have sent letters in your own name to all the people who are at Jerusalem, and to Zephaniah the son of Maaseiah, the priest, and to all the priests, saying,
- American Standard Version (ASV)
- Thus speaketh Jehovah of hosts, the God of Israel, saying, Because thou hast sent letters in thine own name unto all the people that are at Jerusalem, and to Zephaniah the son of Maaseiah, the priest, and to all the priests, saying,
- Bible in Basic English (BBE)
- Shemaiah the Nehelamite sent a letter in his name to Zephaniah, the son of Maaseiah the priest, saying,
- Darby Translation (DBY)
- Thus speaketh Jehovah of hosts, the God of Israel, saying, Because thou hast sent letters in thy name unto all the people that are at Jerusalem, and to Zephaniah the son of Maaseiah the priest, and to all the priests, saying,
- Webster's Bible (WBS)
- Thus speaketh the LORD of hosts, the God of Israel, saying, Because thou hast sent letters in thy name to all the people that [are] at Jerusalem, and to Zephaniah the son of Maaseiah the priest, and to all the priests, saying,
- Young's Literal Translation (YLT)
- Thus said Jehovah of Hosts, God of Israel, saying, Because that thou hast sent in thy name letters unto all the people who [are] in Jerusalem, and unto Zephaniah son of Maaseiah the priest, and unto all the priests, saying,
Read in context
- 23ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 24ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು--
- 25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
- 26ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
- 27ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ?
Cross references
- Jeremiah 37:3 ಯೆರೆಮೀಯ 37:3ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
- Jeremiah 29:29 ಯೆರೆಮೀಯ 29:29ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
- Jeremiah 52:24 ಯೆರೆಮೀಯ 52:24ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
- 1 Kings 21:8–13 1 ಅರಸುಗಳು 21:8–13ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು. ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ-- ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು. ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- Ezra 4:7–16 ಎಜ್ರನು 4:7–16ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು. ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿ ಯಾದ ಶಿಂಷೈಯೂ ಯೆರೂಸಲೇಮಿಗೆ ವಿರೋಧವಾಗಿ ಅರಸನಾದ ಆರ್ತಷಸ್ತನಿಗೆ-- ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ-- ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು. ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ. ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ. ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ. ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ. ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
- Nehemiah 6:19 ನೆಹೆಮೀಯ 6:19ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
- Nehemiah 6:5 ನೆಹೆಮೀಯ 6:5ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು.
- 2 Chronicles 32:17 2 ಪೂರ್ವಕಾಲವೃತ್ತಾಂತ 32:17ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
- 2 Kings 10:1–7 2 ಅರಸುಗಳು 10:1–7ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ-- ನಿಮ್ಮ ಯಜಮಾನನ ಕುಮಾರರು ನಿಮ್ಮ ಬಳಿಯಲ್ಲಿ ಇದ್ದಾರೆ; ಇದಲ್ಲದೆ ರಥಗಳೂ ಕುದುರೆಗಳೂ ಕೋಟೆಯೂ ಆಯುಧಗಳೂ ನಿಮಗೆ ಉಂಟು. ಆದದರಿಂದ ಈ ಪತ್ರವು ನಿಮ್ಮ ಬಳಿಗೆ ಬಂದಾಗ ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು. ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು. ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು. ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
- Jeremiah 21:1–2 ಯೆರೆಮೀಯ 21:1–2ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
- 2 Kings 19:9 2 ಅರಸುಗಳು 19:9ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
- 2 Kings 25:18–21 2 ಅರಸುಗಳು 25:18–21ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು. ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು. ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು. ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
Original words (Hebrew)
- speaketh · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- saying · H559אָמַר ʼâmar
- sent · H7971שָׁלַח shâlach
- letters · H5612סֵפֶר çêpher
- name · H8034שֵׁם shêm
- people · H5971עַם ʻam
- Jerusalem · H3389יְרוּשָׁלַ͏ִם Yᵉrûwshâlaim
- Zephaniah · H6846צְפַנְיָה Tsᵉphanyâh
- son · H1121בֵּן bên
- Maaseiah · H4641מַעֲשֵׂיָה Maʻăsêyâh
- priest · H3548כֹּהֵן kôhên
- priests · H3548כֹּהֵן kôhên
- saying · H559אָמַר ʼâmar