Jeremiah · chapter 29 · verse 8
Jeremiah 29:8 in Kannada
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
Israayelina devaraada sainyagala kartanu heege heluttaane--nimma madhya dalliruva nimma pravaadigaloo shakunadavaroo nimage mosamaadadirali; nimagaagi kanasu kandu helu vavarige kivigodabediri.
Jeremiah 29:8 in English
- King James Version (KJV)
- For thus saith the LORD of hosts, the God of Israel; Let not your prophets and your diviners, that [be] in the midst of you, deceive you, neither hearken to your dreams which ye cause to be dreamed.
- World English Bible (WEB)
- For the LORD of Armies, the God of Israel says: “Don’t let your prophets who are among you and your diviners deceive you. Don’t listen to your dreams which you cause to be dreamed.
- American Standard Version (ASV)
- For thus saith Jehovah of hosts, the God of Israel: Let not your prophets that are in the midst of you, and your diviners, deceive you; neither hearken ye to your dreams which ye cause to be dreamed.
- Bible in Basic English (BBE)
- For this is what the Lord of armies, the God of Israel, has said: Do not let yourselves be tricked by the prophets who are among you, and the readers of signs, and give no attention to their dreams which they may have;
- Darby Translation (DBY)
- For thus saith Jehovah of hosts, the God of Israel: Let not your prophets that are in your midst, nor your diviners deceive you, neither hearken to your dreams, which ye like to dream.
- Webster's Bible (WBS)
- For thus saith the LORD of hosts, the God of Israel; Let not your prophets and your diviners, that [are] in the midst of you, deceive you, neither hearken to your dreams which ye cause to be dreamed.
- Young's Literal Translation (YLT)
- 'For thus said Jehovah of Hosts, God of Israel, Let not your prophets who [are] in your midst, and your diviners, lift you up, nor hearken ye unto their dreams, that ye are causing [them] to dream;
Read in context
- 6ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
- 7ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.
- 8ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
- 9ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
- 10ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
Cross references
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- 2 Thessalonians 2:9–11 2 ಥೆಸಲೊನೀಕದವರಿಗೆ 2:9–11ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- 2 Peter 2:2–3 2 ಪೇತ್ರನು 2:2–3ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Jeremiah 27:14–15 ಯೆರೆಮೀಯ 27:14–15ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
- Jeremiah 28:15 ಯೆರೆಮೀಯ 28:15ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
- Revelation 13:14 ಪ್ರಕಟನೆ 13:14ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
- Jeremiah 14:14 ಯೆರೆಮೀಯ 14:14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
- Jeremiah 27:9 ಯೆರೆಮೀಯ 27:9ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- 2 John 1:7–9 2 ಯೋಹಾನನು 1:7–9ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ. ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ. ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
- Matthew 24:4–5 ಮತ್ತಾಯನು 24:4–5ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ. ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.