Jeremiah · chapter 3 · verse 1
Jeremiah 3:1 in Kannada
ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
Obbanu tanna hendatiyannu bittubittaaga avalu avanannu bittu hogi bereyavanavalaadare avanu innu avala hattira hintiruguvano? Aa deshavu bahalavaagi apavitravaaguvadillavo? Neenu aneka mindara sangada sooletana maadiddee; aadaagyoo nanna balige tirugiko endu kartanu annuttaane.
Jeremiah 3:1 in English
- King James Version (KJV)
- They say, If a man put away his wife, and she go from him, and become another man’s, shall he return unto her again? shall not that land be greatly polluted? but thou hast played the harlot with many lovers; yet return again to me, saith the LORD.
- World English Bible (WEB)
- “They say, ‘If a man puts away his wife, and she goes from him, and becomes another man’s, should he return to her again?’ Wouldn’t that land be greatly polluted? But you have played the prostitute with many lovers; yet return again to me,” says the LORD.
- American Standard Version (ASV)
- They say, If a man put away his wife, and she go from him, and become another man’s, will he return unto her again? will not that land be greatly polluted? But thou hast played the harlot with many lovers; yet return again to me, saith Jehovah.
- Bible in Basic English (BBE)
- They say, If a man puts away his wife and she goes from him and becomes another man's, will he go back to her again? will not that land have been made unclean? but though you have been acting like a loose woman with a number of lovers, will you now come back to me? says the Lord.
- Darby Translation (DBY)
- They say, If a man put away his wife, and she go from him, and become another man's, shall he return unto her again? Would not that land be utterly polluted? But thou hast committed fornication with many lovers; yet return to me, saith Jehovah.
- Webster's Bible (WBS)
- They say, If a man shall put away his wife, and she shall go from him, and become another man's, shall he return to her again? shall not that land be greatly polluted? but thou hast played the harlot with many lovers; yet return again to me, saith the LORD.
- Young's Literal Translation (YLT)
- Saying, 'Lo, one sendeth away his wife, And she hath gone from him, And she hath been to another man, Doth he turn back unto her again? Greatly defiled is not that land? And thou hast committed whoredom with many lovers, And turn again to Me, an affirmation of Jehovah.
Read in context
- 1ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
- 2ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
- 3ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
Cross references
- Deuteronomy 24:1–4 ಧರ್ಮೋಪದೇಶಕಾಂಡ 24:1–4ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು. ಅವಳು ಅವನ ಮನೆಯನ್ನು ಬಿಟ್ಟು ಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗ ಬಹುದು. ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
- Ezekiel 16:26 ಯೆಹೆಜ್ಕೇಲನು 16:26ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Ezekiel 23:4–49 ಯೆಹೆಜ್ಕೇಲನು 23:4–49ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು. ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು, ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು. ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು. ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು. ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು. ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು. ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು. ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು; ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು. ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು. ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು. ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ. ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ. ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ. ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು. ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು; ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ. ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು. ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ. ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು. ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ. ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು. ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು. ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ. ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ. ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ; ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ. ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು. ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು. ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ? ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು. ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು. ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು. ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ. ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
- Hosea 2:5–7 ಹೋಶೇಯ 2:5–7ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ. ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು. ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
- Ezekiel 16:28–29 ಯೆಹೆಜ್ಕೇಲನು 16:28–29ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ. ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
- Deuteronomy 4:29–31 ಧರ್ಮೋಪದೇಶಕಾಂಡ 4:29–31ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Hosea 14:1–4 ಹೋಶೇಯ 14:1–4ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ; ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು. ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ. ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
- Jeremiah 4:1 ಯೆರೆಮೀಯ 4:1ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.
- Ezekiel 33:11 ಯೆಹೆಜ್ಕೇಲನು 33:11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
- Hosea 1:2 ಹೋಶೇಯ 1:2ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
- Luke 15:16–24 ಲೂಕನು 15:16–24ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ. ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು. ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು. ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ; ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ; ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
Original words (Hebrew)
- say · H559אָמַר ʼâmar
- man · H376אִישׁ ʼîysh
- away · H7971שָׁלַח shâlach
- wife · H802אִשָּׁה ʼishshâh
- go · H1980הָלַךְ hâlak
- another · H312אַחֵר ʼachêr
- man’s · H376אִישׁ ʼîysh
- again · H7725שׁוּב shûwb
- land · H776אֶרֶץ ʼerets
- greatly · H2610חָנֵף chânêph
- polluted · H2610חָנֵף chânêph
- harlot · H2181זָנָה zânâh
- many · H7227רַב rab
- lovers · H7453רֵעַ rêaʻ
- again · H7725שׁוּב shûwb
- saith · H5002נְאֻם nᵉʼum