Jeremiah · chapter 3 · verse 20
Jeremiah 3:20 in Kannada
ನಿಶ್ಚಯವಾಗಿ ಹೆಂಡತಿಯು ತನ್ನ ಗಂಡನನ್ನು ವಂಚಿಸಿ ಬಿಡುವ ಪ್ರಕಾರ ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
Nishchayavaagi hendatiyu tanna gandanannu vanchisi biduva prakaara o israayelina manetanadavare, nanage vanchane maadiddeeri endu kartanu annuttaane.
Jeremiah 3:20 in English
- King James Version (KJV)
- Surely [as] a wife treacherously departeth from her husband, so have ye dealt treacherously with me, O house of Israel, saith the LORD.
- World English Bible (WEB)
- “Surely as a wife treacherously departs from her husband, so you have dealt treacherously with me, house of Israel,” says the LORD.
- American Standard Version (ASV)
- Surely as a wife treacherously departeth from her husband, so have ye dealt treacherously with me, O house of Israel, saith Jehovah.
- Bible in Basic English (BBE)
- Truly, as a wife is false to her husband, so have you been false to me, O Israel, says the Lord.
- Darby Translation (DBY)
- Surely [as] a woman treacherously departeth from her companion, so have ye dealt treacherously with me, O house of Israel, saith Jehovah.
- Webster's Bible (WBS)
- Surely [as] a wife treacherously departeth from her husband, so have ye dealt treacherously with me, O house of Israel, saith the LORD.
- Young's Literal Translation (YLT)
- But — a woman hath deceived her friend, So ye have dealt treacherously with Me, O house of Israel, an affirmation of Jehovah.
Read in context
- 18ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
- 19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- 20ನಿಶ್ಚಯವಾಗಿ ಹೆಂಡತಿಯು ತನ್ನ ಗಂಡನನ್ನು ವಂಚಿಸಿ ಬಿಡುವ ಪ್ರಕಾರ ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
- 21ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
- 22ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
Cross references
- Isaiah 48:8 ಯೆಶಾಯ 48:8ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
- Jeremiah 5:11 ಯೆರೆಮೀಯ 5:11ಇಸ್ರಾಯೇಲ್ಯನ ಮನೆತನದವರೂ ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾ ರೆಂದು ಕರ್ತನು ಅನ್ನುತ್ತಾನೆ.
- Jeremiah 3:8–10 ಯೆರೆಮೀಯ 3:8–10ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು. ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು. ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
- Hosea 5:7 ಹೋಶೇಯ 5:7ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
- Jeremiah 3:1–2 ಯೆರೆಮೀಯ 3:1–2ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
- Hosea 3:1 ಹೋಶೇಯ 3:1ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
- Ezekiel 16:15–52 ಯೆಹೆಜ್ಕೇಲನು 16:15–52ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ. ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ. ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ. ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ. ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ; ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ. ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;) ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ. ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ. ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ. ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ. ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ. ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ. ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ; ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ! ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ. ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ. ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು. ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು. ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು. ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು. ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು; ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ. ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು. ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು. ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು. ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ. ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ. ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
- Hosea 6:7 ಹೋಶೇಯ 6:7ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
- Malachi 2:11 ಮಲಾಕಿಯ 2:11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.