Jeremiah · chapter 3 · verse 22
Jeremiah 3:22 in Kannada
ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
Hinjarida makkale, neevu tirugikolliri; nimma hinjariyuvikeyannu naanu svasthamaaduvenu endu kartanu annuttaane. Igo, ninna balige barutteve; neenu devaraada namma kartanaagiddee.
Jeremiah 3:22 in English
- King James Version (KJV)
- Return, ye backsliding children, [and] I will heal your backslidings. Behold, we come unto thee; for thou [art] the LORD our God.
- World English Bible (WEB)
- Return, you backsliding children, and I will heal your backsliding. “Behold, we have come to you; for you are the LORD our God.
- American Standard Version (ASV)
- Return, ye backsliding children, I will heal your backslidings. Behold, we are come unto thee; for thou art Jehovah our God.
- Bible in Basic English (BBE)
- Come back, you children who have been turned away, and I will take away your desire for wandering. See, we have come to you, for you are the Lord our God.
- Darby Translation (DBY)
- — Return, backsliding children; I will heal your backslidings. ...Behold, we come unto thee; for thou art Jehovah our God.
- Webster's Bible (WBS)
- Return, ye backsliding children, [and] I will heal your backslidings. Behold, we come to thee; for thou [art] the LORD our God.
- Young's Literal Translation (YLT)
- Turn back, O backsliding sons, I cause your backslidings to cease. — Behold us, we have come to Thee, For Thou [art] Jehovah our God.
Read in context
- 20ನಿಶ್ಚಯವಾಗಿ ಹೆಂಡತಿಯು ತನ್ನ ಗಂಡನನ್ನು ವಂಚಿಸಿ ಬಿಡುವ ಪ್ರಕಾರ ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
- 21ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
- 22ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
- 23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
- 24ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
Cross references
- Hosea 14:1 ಹೋಶೇಯ 14:1ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
- Hosea 14:4 ಹೋಶೇಯ 14:4ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Jeremiah 30:17 ಯೆರೆಮೀಯ 30:17ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
- Hosea 6:1–2 ಹೋಶೇಯ 6:1–2ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ. ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- Hosea 13:4 ಹೋಶೇಯ 13:4ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Song of Solomon 1:4 ಪರಮಗೀತೆ 1:4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
- Jeremiah 31:18 ಯೆರೆಮೀಯ 31:18ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
- Hosea 14:8 ಹೋಶೇಯ 14:8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Jeremiah 33:6 ಯೆರೆಮೀಯ 33:6ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
- Isaiah 27:8 ಯೆಶಾಯ 27:8ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.