Jeremiah · chapter 30 · verse 15
Jeremiah 30:15 in Kannada
ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
Ninna gaayada novina nimitta yaake kooguttee? Ninna duhkhavu gunavaaga danthadde; ninna akramagalu bahalavaagiruvada rindaloo ninna paapagalu prabalavaagiruvada rindaloo ivugalannu ninage maadiddene.
Jeremiah 30:15 in English
- King James Version (KJV)
- Why criest thou for thine affliction? thy sorrow [is] incurable for the multitude of thine iniquity: [because] thy sins were increased, I have done these things unto thee.
- World English Bible (WEB)
- Why do you cry over your injury? Your pain is incurable. For the greatness of your iniquity, because your sins have increased, I have done these things to you.
- American Standard Version (ASV)
- Why criest thou for thy hurt? thy pain is incurable: for the greatness of thine iniquity, because thy sins were increased, I have done these things unto thee.
- Bible in Basic English (BBE)
- Why are you crying for help because of your wound? for your pain may never be taken away: because your evil-doing was so great and because your sins were increased, I have done these things to you.
- Darby Translation (DBY)
- Why criest thou because of thy bruise? thy sorrow is incurable; for the greatness of thine iniquity, [because] thy sins are manifold, I have done these things unto thee.
- Webster's Bible (WBS)
- Why criest thou for thy affliction? thy sorrow [is] incurable for the multitude of thy iniquity: [because] thy sins were increased, I have done these things to thee.
- Young's Literal Translation (YLT)
- What! — thou criest concerning thy breach! Incurable [is] thy pain, Because of the abundance of thy iniquity, Mighty have been thy sins! I have done these to thee.
Read in context
- 13ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
- 14ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ.
- 15ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
- 16ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
- 17ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
Cross references
- Jeremiah 30:14 ಯೆರೆಮೀಯ 30:14ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ.
- Jeremiah 30:12 ಯೆರೆಮೀಯ 30:12ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
- Job 34:29 ಯೋಬನು 34:29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- Micah 7:9 ಮೀಕ 7:9ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
- Isaiah 30:13–14 ಯೆಶಾಯ 30:13–14ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು. ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ ಬಾವಿಯಿಂದ ನೀರನ್ನು ತೆಗೆಯುವದಕ್ಕಾಗಲಿ ಬೋಕಿ ಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.
- Isaiah 1:4–5 ಯೆಶಾಯ 1:4–5ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ. ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Ezekiel 22:1–23 ಯೆಹೆಜ್ಕೇಲನು 22:1–23ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ. ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ. ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ. ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು. ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ. ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ. ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ. ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ. ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ; ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ. ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ. ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ. ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ. ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು. ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ -- ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ. ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು. ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ. ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ. ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- Jeremiah 9:1–9 ಯೆರೆಮೀಯ 9:1–9ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು. ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ. ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ. ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ? ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ. ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Isaiah 59:1–4 ಯೆಶಾಯ 59:1–4ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ. ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ. ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ. ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
- Jeremiah 6:6–7 ಯೆರೆಮೀಯ 6:6–7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ. ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
- Lamentations 5:16–17 ಪ್ರಲಾಪಗಳು 5:16–17ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ. ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
- Jeremiah 6:13 ಯೆರೆಮೀಯ 6:13ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.