Jeremiah · chapter 30 · verse 19
Jeremiah 30:19 in Kannada
ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
Avugalolaginda krutajnyataa stotravoo santo shapaduvavara svaravoo horaduvadu; avarannu abhivruddhimaaduvenu; avaru konchavaagiraru, avaru alpavaagada haage avarige ghanavannu koduvenu.
Jeremiah 30:19 in English
- King James Version (KJV)
- And out of them shall proceed thanksgiving and the voice of them that make merry: and I will multiply them, and they shall not be few; I will also glorify them, and they shall not be small.
- World English Bible (WEB)
- Thanksgiving will proceed out of them with the voice of those who make merry. I will multiply them, and they will not be few; I will also glorify them, and they will not be small.
- American Standard Version (ASV)
- And out of them shall proceed thanksgiving and the voice of them that make merry: and I will multiply them, and they shall not be few; I will also glorify them, and they shall not be small.
- Bible in Basic English (BBE)
- And from them will go out praise and the sound of laughing: and I will make them great in number, and they will not become less; and I will give them glory, and they will not be small.
- Darby Translation (DBY)
- And out of them shall proceed thanksgiving, and the voice of them that make merry: and I will multiply them, and they shall not be diminished; and I will honour them, and they shall not be small.
- Webster's Bible (WBS)
- And out of them shall proceed thanksgiving and the voice of them that make merry: and I will multiply them, and they shall not be few; I will also glorify them, and they shall not be small.
- Young's Literal Translation (YLT)
- And gone forth from them hath thanksgiving, And the voice of playful ones, And I have multiplied them and they are not few, And made them honourable, and they are not small.
Read in context
- 17ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
- 18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
- 19ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
- 20ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.
- 21ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
Cross references
- Jeremiah 33:22 ಯೆರೆಮೀಯ 33:22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
- Isaiah 60:22 ಯೆಶಾಯ 60:22ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Isaiah 51:11 ಯೆಶಾಯ 51:11ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 31:12–13 ಯೆರೆಮೀಯ 31:12–13ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ. ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
- Jeremiah 31:4 ಯೆರೆಮೀಯ 31:4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
- Zechariah 10:8 ಜೆಕರ್ಯ 10:8ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
- Zechariah 12:8 ಜೆಕರ್ಯ 12:8ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
- Psalm 126:1–2 ಕೀರ್ತನೆಗಳು 126:1–2ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು. ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
- Zechariah 8:4–5 ಜೆಕರ್ಯ 8:4–5ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು. ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು.
- Zechariah 8:19 ಜೆಕರ್ಯ 8:19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.