Jeremiah · chapter 30 · verse 2
Jeremiah 30:2 in Kannada
ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.
Naanu ninage helida vaakyagalannellaa ondu pustakadalli bare.
Jeremiah 30:2 in English
- King James Version (KJV)
- Thus speaketh the LORD God of Israel, saying, Write thee all the words that I have spoken unto thee in a book.
- World English Bible (WEB)
- “The LORD, the God of Israel, says, ‘Write all the words that I have spoken to you in a book.
- American Standard Version (ASV)
- Thus speaketh Jehovah, the God of Israel, saying, Write thee all the words that I have spoken unto thee in a book.
- Bible in Basic English (BBE)
- The Lord, the God of Israel, has said, Put down in a book all the words which I have said to you.
- Darby Translation (DBY)
- Thus speaketh Jehovah the God of Israel, saying, Write thee in a book all the words that I have spoken unto thee.
- Webster's Bible (WBS)
- Thus speaketh the LORD God of Israel, saying, Write for thee all the words that I have spoken to thee in a book.
- Young's Literal Translation (YLT)
- 'Thus spake Jehovah, God of Israel, saying, Write for thee all the words that I have spoken unto thee on a book.
Read in context
- 1ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ, ಇಸ್ರಾಯೇಲಿನ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--
- 2ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.
- 3ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
- 4ಕರ್ತನು ಇಸ್ರಾಯೇಲನ್ನೂ ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ--
Cross references
- Isaiah 30:8 ಯೆಶಾಯ 30:8ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
- Jeremiah 36:32 ಯೆರೆಮೀಯ 36:32ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
- 1 Corinthians 10:11 1 ಕೊರಿಂಥದವರಿಗೆ 10:11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- Revelation 1:19 ಪ್ರಕಟನೆ 1:19ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
- Romans 15:4 ರೋಮಾಪುರದವರಿಗೆ 15:4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
- Revelation 1:11 ಪ್ರಕಟನೆ 1:11ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
- Jeremiah 51:60–64 ಯೆರೆಮೀಯ 51:60–64ಹೀಗೆ ಯೆರೆವಿಾಯನು ಬಾಬೆಲಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬೆಲಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆದನು. ಯೆರೆವಿಾಯನು ಸೆರಾಯನಿಗೆ ಹೇಳಿದ್ದೇನಂದರೆ-- ನೀನು ಬಾಬೆಲಿಗೆ ಬಂದು ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ. ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Jeremiah 36:2–4 ಯೆರೆಮೀಯ 36:2–4ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು. ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
- Habakkuk 2:2–3 ಹಬಕ್ಕೂಕ 2:2–3ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು. ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Daniel 12:4 ದಾನಿಯೇಲನು 12:4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
- Exodus 17:14 ವಿಮೋಚನಕಾಂಡ 17:14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.