Jeremiah · chapter 31 · verse 17
Jeremiah 31:17 in Kannada
ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
Ninna antyadalli nireekshe untendu kartanu annuttaane; ninna makkalu tamma merege tirugi baruvaru.
Jeremiah 31:17 in English
- King James Version (KJV)
- And there is hope in thine end, saith the LORD, that thy children shall come again to their own border.
- World English Bible (WEB)
- There is hope for your latter end,” says the LORD. “Your children will come again to their own territory.
- American Standard Version (ASV)
- And there is hope for thy latter end, saith Jehovah; and [thy] children shall come again to their own border.
- Bible in Basic English (BBE)
- And there is hope for the future, says the Lord; and your children will come back to the land which is theirs.
- Darby Translation (DBY)
- And there is hope for thy latter end, saith Jehovah, and thy children shall come again to their own border.
- Webster's Bible (WBS)
- And there is hope in thy end, saith the LORD, that thy children shall come again to their own border.
- Young's Literal Translation (YLT)
- And there is hope for thy latter end, An affirmation of Jehovah, And the sons have turned back [to] their border.
Read in context
- 15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- 16ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.
- 17ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
- 18ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
- 19ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
Cross references
- Lamentations 3:21 ಪ್ರಲಾಪಗಳು 3:21ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Lamentations 3:26 ಪ್ರಲಾಪಗಳು 3:26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Hosea 2:15 ಹೋಶೇಯ 2:15ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
- Lamentations 3:18 ಪ್ರಲಾಪಗಳು 3:18ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
- Jeremiah 29:11–16 ಯೆರೆಮೀಯ 29:11–16ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ. ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ. ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು. ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
- Romans 11:23–26 ರೋಮಾಪುರದವರಿಗೆ 11:23–26ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ. ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ. ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
- Isaiah 11:11–16 ಯೆಶಾಯ 11:11–16ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು. ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು. ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು. ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು. ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Ezekiel 37:25 ಯೆಹೆಜ್ಕೇಲನು 37:25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Matthew 24:22 ಮತ್ತಾಯನು 24:22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- Isaiah 6:13 ಯೆಶಾಯ 6:13ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Psalm 102:13–14 ಕೀರ್ತನೆಗಳು 102:13–14ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ. ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.