Jeremiah · chapter 31 · verse 3
Jeremiah 31:3 in Kannada
ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
Hindinante kartanu bandu nanage kaanisikondu--haudu, shaashvatavaada preeti yinda ninnannu preeti maadiddene; aadadarinda preeti dayegalinda ninnannu elediddene.
Jeremiah 31:3 in English
- King James Version (KJV)
- The LORD hath appeared of old unto me, [saying], Yea, I have loved thee with an everlasting love: therefore with lovingkindness have I drawn thee.
- World English Bible (WEB)
- The LORD appeared of old to me, saying, “Yes, I have loved you with an everlasting love. Therefore I have drawn you with loving kindness.
- American Standard Version (ASV)
- Jehovah appeared of old unto me, [saying], Yea, I have loved thee with an everlasting love: therefore with lovingkindness have I drawn thee.
- Bible in Basic English (BBE)
- From far away he saw the Lord: my love for you is an eternal love: so with mercy I have made you come with me.
- Darby Translation (DBY)
- Jehovah hath appeared from afar unto me, [saying,] Yea, I have loved thee with an everlasting love; therefore with loving-kindness have I drawn thee.
- Webster's Bible (WBS)
- The LORD appeared of old to me, [saying] , I have loved thee with an everlasting love: therefore with loving-kindness have I drawn thee.
- Young's Literal Translation (YLT)
- From afar Jehovah hath appeared to me, With love age-during I have loved thee, Therefore I have drawn thee [with] kindness.
Read in context
- 1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
- 2ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.
- 3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
- 4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
- 5ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.
Cross references
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Isaiah 54:8–9 ಯೆಶಾಯ 54:8–9ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
- Hosea 11:4 ಹೋಶೇಯ 11:4ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.
- Ephesians 2:4–5 ಎಫೆಸದವರಿಗೆ 2:4–5ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Deuteronomy 33:3 ಧರ್ಮೋಪದೇಶಕಾಂಡ 33:3ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
- 1 John 4:19 1 ಯೋಹಾನನು 4:19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
- Deuteronomy 7:7–9 ಧರ್ಮೋಪದೇಶಕಾಂಡ 7:7–9ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ. ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು. ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- Romans 8:30 ರೋಮಾಪುರದವರಿಗೆ 8:30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Ephesians 1:3–5 ಎಫೆಸದವರಿಗೆ 1:3–5ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು. ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Titus 3:3–6 ತೀತನಿಗೆ 3:3–6ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.