Jeremiah · chapter 31 · verse 32
Jeremiah 31:32 in Kannada
ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
Naanu avara tandegala sangada avarannu aiguptadeshadinda horataruvadakke avara kai hidida dinadalli maadida odambadikeya haagalla; naanu avara yajamaananaagiddaagyoo aa nanna odambadikeyannu avaru viాridarendu, kartanu annuttaane.
Jeremiah 31:32 in English
- King James Version (KJV)
- Not according to the covenant that I made with their fathers in the day [that] I took them by the hand to bring them out of the land of Egypt; which my covenant they brake, although I was an husband unto them, saith the LORD:
- World English Bible (WEB)
- not according to the covenant that I made with their fathers in the day that I took them by the hand to bring them out of the land of Egypt, which covenant of mine they broke, although I was a husband to them,” says the LORD.
- American Standard Version (ASV)
- not according to the covenant that I made with their fathers in the day that I took them by the hand to bring them out of the land of Egypt; which my covenant they brake, although I was a husband unto them, saith Jehovah.
- Bible in Basic English (BBE)
- Not like the agreement which I made with their fathers, on the day when I took them by the hand to be their guide out of the land of Egypt; which agreement was broken by them, and I gave them up, says the Lord.
- Darby Translation (DBY)
- not according to the covenant that I made with their fathers, in the day of my taking them by the hand, to lead them out of the land of Egypt; which my covenant they broke, although I was a husband unto them, saith Jehovah.
- Webster's Bible (WBS)
- Not according to the covenant that I made with their fathers in the day [that] I took them by the hand to bring them out of the land of Egypt; which my covenant they broke, although I was a husband to them, saith the LORD:
- Young's Literal Translation (YLT)
- Not like the covenant that I made with their fathers, In the day of My laying hold on their hand, To bring them out of the land of Egypt, In that they made void My covenant, And I ruled over them — an affirmation of Jehovah.
Read in context
- 30ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.
- 31ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
- 32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
- 33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- 34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
Cross references
- Exodus 24:6–8 ವಿಮೋಚನಕಾಂಡ 24:6–8ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು. ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು. ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- Deuteronomy 1:31 ಧರ್ಮೋಪದೇಶಕಾಂಡ 1:31ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.
- Exodus 19:5 ವಿಮೋಚನಕಾಂಡ 19:5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
- Deuteronomy 5:3 ಧರ್ಮೋಪದೇಶಕಾಂಡ 5:3ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- Jeremiah 3:14 ಯೆರೆಮೀಯ 3:14ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
- Ezekiel 16:8 ಯೆಹೆಜ್ಕೇಲನು 16:8ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 16:59–62 ಯೆಹೆಜ್ಕೇಲನು 16:59–62ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ. ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು. ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ. ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Leviticus 26:15 ಯಾಜಕಕಾಂಡ 26:15ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
- Jeremiah 11:7–10 ಯೆರೆಮೀಯ 11:7–10ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು, ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ. ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
- Hosea 3:1 ಹೋಶೇಯ 3:1ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
- Psalm 73:23 ಕೀರ್ತನೆಗಳು 73:23ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.
Original words (Hebrew)
- covenant · H1285בְּרִית bᵉrîyth
- made · H3772כָּרַת kârath
- fathers · H1אָב ʼâb
- day · H3117יוֹם yôwm
- took · H2388חָזַק châzaq
- hand · H3027יָד yâd
- out · H3318יָצָא yâtsâʼ
- land · H776אֶרֶץ ʼerets
- Egypt · H4714מִצְרַיִם Mitsrayim
- covenant · H1285בְּרִית bᵉrîyth
- brake · H6565פָּרַר pârar
- husband · H1166בָּעַל bâʻal
- saith · H5002נְאֻם nᵉʼum