Jeremiah · chapter 31 · verse 6
Jeremiah 31:6 in Kannada
ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
Ondu dinavade; aaga ephraayaamina parvatadalli kaayuvavaru--eliri, cheeyonige, namma devaraada kartana balige hogona endu kooguvaru.
Jeremiah 31:6 in English
- King James Version (KJV)
- For there shall be a day, [that] the watchmen upon the mount Ephraim shall cry, Arise ye, and let us go up to Zion unto the LORD our God.
- World English Bible (WEB)
- For there will be a day that the watchmen on the hills of Ephraim cry, ‘Arise! Let’s go up to Zion to the LORD our God.’”
- American Standard Version (ASV)
- For there shall be a day, that the watchmen upon the hills of Ephraim shall cry, Arise ye, and let us go up to Zion unto Jehovah our God.
- Bible in Basic English (BBE)
- For there will be a day when those who get in the grapes on the hills of Ephraim will be crying, Up! let us go up to Zion to the Lord our God.
- Darby Translation (DBY)
- For there shall be a day, when the watchmen upon mount Ephraim shall cry, Arise, and let us go up to Zion, unto Jehovah our God.
- Webster's Bible (WBS)
- For there shall be a day, [that] the watchmen upon the mount Ephraim shall cry, Arise ye, and let us go up to Zion to the LORD our God.
- Young's Literal Translation (YLT)
- For there is a day, Cried have watchmen on mount Ephraim, 'Rise, and we go up to Zion, unto Jehovah our God;
Read in context
- 4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
- 5ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.
- 6ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
- 7ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
- 8ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
Cross references
- Jeremiah 50:4–5 ಯೆರೆಮೀಯ 50:4–5ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Zechariah 8:20–23 ಜೆಕರ್ಯ 8:20–23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು; ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Jeremiah 50:19 ಯೆರೆಮೀಯ 50:19ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
- Micah 4:1–3 ಮೀಕ 4:1–3ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು. ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು. ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
- Isaiah 2:2–4 ಯೆಶಾಯ 2:2–4ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು. ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- Isaiah 52:7–8 ಯೆಶಾಯ 52:7–8ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ! ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
- Jeremiah 6:17 ಯೆರೆಮೀಯ 6:17ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
- 2 Chronicles 13:4 2 ಪೂರ್ವಕಾಲವೃತ್ತಾಂತ 13:4ಆಗ ಅಬೀಯನು ಎಫ್ರಾಯಾಮ್ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ.
- Hosea 1:11 ಹೋಶೇಯ 1:11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Isaiah 11:11–13 ಯೆಶಾಯ 11:11–13ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು. ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
- Isaiah 40:9 ಯೆಶಾಯ 40:9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
- Ezekiel 33:2 ಯೆಹೆಜ್ಕೇಲನು 33:2ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,