Jeremiah · chapter 32 · verse 33
Jeremiah 32:33 in Kannada
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
Avaru nanage mukhavannalla bennannu tirugisiddaare; aadaroo naanu avarige bodhisidenu. Beligge eddu bodhisidenu, aadaagyoo upadesha honduvadakke avaru kivi godalilla.
Jeremiah 32:33 in English
- King James Version (KJV)
- And they have turned unto me the back, and not the face: though I taught them, rising up early and teaching [them], yet they have not hearkened to receive instruction.
- World English Bible (WEB)
- They have turned their backs to me, and not their faces. Although I taught them, rising up early and teaching them, yet they have not listened to receive instruction.
- American Standard Version (ASV)
- And they have turned unto me the back, and not the face: and though I taught them, rising up early and teaching them, yet they have not hearkened to receive instruction.
- Bible in Basic English (BBE)
- And they have been turning their backs and not their faces to me: and though I was their teacher, getting up early and teaching them, their ears were not open to teaching.
- Darby Translation (DBY)
- And they have turned unto me the back, and not the face; and though I taught them, rising early and teaching, they hearkened not to receive instruction.
- Webster's Bible (WBS)
- And they have turned to me the back, and not the face: though I taught them, rising early and teaching [them] , yet they have not hearkened to receive instruction.
- Young's Literal Translation (YLT)
- And they turn unto Me the neck, and not the face, and teaching them, rising early and teaching, and they are not hearkening to accept instruction.
Read in context
- 31ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
- 32ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
- 33ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
- 34ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
- 35ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
Cross references
- Jeremiah 7:13 ಯೆರೆಮೀಯ 7:13ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
- Ezekiel 8:16 ಯೆಹೆಜ್ಕೇಲನು 8:16ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
- Jeremiah 2:27 ಯೆರೆಮೀಯ 2:27ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
- Jeremiah 7:24 ಯೆರೆಮೀಯ 7:24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
- Jeremiah 26:5 ಯೆರೆಮೀಯ 26:5ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ
- John 8:2 ಯೋಹಾನನು 8:2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
- Jeremiah 35:15 ಯೆರೆಮೀಯ 35:15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
- 2 Chronicles 36:15–16 2 ಪೂರ್ವಕಾಲವೃತ್ತಾಂತ 36:15–16ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Jeremiah 18:17 ಯೆರೆಮೀಯ 18:17ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
- Hosea 11:2 ಹೋಶೇಯ 11:2ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
- Jeremiah 25:3–4 ಯೆರೆಮೀಯ 25:3–4ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ. ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
- Zechariah 7:11 ಜೆಕರ್ಯ 7:11ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.