Jeremiah · chapter 32 · verse 34
Jeremiah 32:34 in Kannada
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
Aadare nanna hesarininda kareya lpattiruva maneyalli adannu apavitra maaduva haage tamma asahyagalannu ittiddaare.
Jeremiah 32:34 in English
- King James Version (KJV)
- But they set their abominations in the house, which is called by my name, to defile it.
- World English Bible (WEB)
- But they set their abominations in the house which is called by my name, to defile it.
- American Standard Version (ASV)
- But they set their abominations in the house which is called by my name, to defile it.
- Bible in Basic English (BBE)
- But they put their disgusting images into the house which is named by my name, making it unclean.
- Darby Translation (DBY)
- And they have set their abominations in the house which is called by my name, to defile it;
- Webster's Bible (WBS)
- But they set their abominations in the house, which is called by my name, to defile it.
- Young's Literal Translation (YLT)
- 'And they set their abominations in the house over which My name is called, so as to defile it;
Read in context
- 32ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
- 33ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
- 34ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
- 35ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
- 36ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
Cross references
- Jeremiah 7:30 ಯೆರೆಮೀಯ 7:30ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
- Ezekiel 8:5–16 ಯೆಹೆಜ್ಕೇಲನು 8:5–16ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು. ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು. ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು. ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ. ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು. ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್ಗೋಸ್ಕರ ಅಳುವ ಹೆಂಗಸರು ಕೂತಿದ್ದರು. ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು. ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
- 2 Kings 21:4–7 2 ಅರಸುಗಳು 21:4–7ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು. ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು. ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
- Jeremiah 23:11 ಯೆರೆಮೀಯ 23:11ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
- 2 Kings 23:6 2 ಅರಸುಗಳು 23:6ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
- 2 Chronicles 33:4–7 2 ಪೂರ್ವಕಾಲವೃತ್ತಾಂತ 33:4–7ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು. ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು. ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
- 2 Chronicles 33:15 2 ಪೂರ್ವಕಾಲವೃತ್ತಾಂತ 33:15ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.