Jeremiah · chapter 32 · verse 37
Jeremiah 32:37 in Kannada
ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
Igo, naanu nanna kopa dalliyoo ugradalliyoo mahaa raudradalliyoo avarannu odisibitta samasta deshagalolaginda avarannu koodisi ee sthalakke tirigi tandu bhadravaagi vaasisuvante maaduvenu.
Jeremiah 32:37 in English
- King James Version (KJV)
- Behold, I will gather them out of all countries, whither I have driven them in mine anger, and in my fury, and in great wrath; and I will bring them again unto this place, and I will cause them to dwell safely:
- World English Bible (WEB)
- “Behold, I will gather them out of all the countries where I have driven them in my anger, and in my wrath, and in great indignation; and I will bring them again to this place. I will cause them to dwell safely.
- American Standard Version (ASV)
- Behold, I will gather them out of all the countries, whither I have driven them in mine anger, and in my wrath, and in great indignation; and I will bring them again unto this place, and I will cause them to dwell safely.
- Bible in Basic English (BBE)
- See, I will get them together from all the countries where I have sent them in my wrath and in the heat of my passion and in my bitter feeling; and I will let them come back into this place where they may take their rest safely.
- Darby Translation (DBY)
- Behold, I will gather them out of all the countries whither I have driven them, in mine anger, and in my fury, and in great wrath; and I will bring them again unto this place, and I will cause them to dwell safely.
- Webster's Bible (WBS)
- Behold, I will gather them out of all countries, whither I have driven them in my anger, and in my fury, and in great wrath; and I will bring them again to this place, and I will cause them to dwell in safety.
- Young's Literal Translation (YLT)
- Lo, I am gathering them out of all the lands whither I have driven them in Mine anger, and in My fury, and in great wrath, and I have brought them back unto this place, and have caused them to dwell confidently;
Read in context
- 35ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
- 36ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
- 37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
- 38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
- 39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
Cross references
- Jeremiah 23:3 ಯೆರೆಮೀಯ 23:3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
- Jeremiah 23:6 ಯೆರೆಮೀಯ 23:6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Ezekiel 34:12–14 ಯೆಹೆಜ್ಕೇಲನು 34:12–14ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು. ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು. ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
- Psalm 106:47 ಕೀರ್ತನೆಗಳು 106:47ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- Ezekiel 11:17 ಯೆಹೆಜ್ಕೇಲನು 11:17ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್ ದೇಶವನ್ನು ನಿಮಗೆ ಕೊಡುತ್ತೇನೆ.
- Jeremiah 33:16 ಯೆರೆಮೀಯ 33:16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- Jeremiah 23:8 ಯೆರೆಮೀಯ 23:8ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
- Jeremiah 29:14 ಯೆರೆಮೀಯ 29:14ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Jeremiah 31:10 ಯೆರೆಮೀಯ 31:10ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
- Isaiah 11:11–16 ಯೆಶಾಯ 11:11–16ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು. ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು. ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು. ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು. ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Zechariah 14:11 ಜೆಕರ್ಯ 14:11ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
- Hosea 1:11 ಹೋಶೇಯ 1:11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.